ಅಂಗನವಾಡಿ ಹುದ್ದೆ ಭರ್ತಿಗೆ ಅರ್ಜಿ ಕರೆ
ಗುಬ್ಬಿ: ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದಾಗಿ ಮಿನಿ ಮತ್ತು ಮೈನರ್ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ನ.26 ರಿಂದ ಡಿ.21ರವರೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಸಿಡಿಪಿಒ ಹೊನ್ನೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರಿಯಣ್ಣನಹಳ್ಳಿ ಗೊಲ್ಲರಹಟ್ಟಿ(ಮಿನಿ) ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆ, ಬೀರಮಾರನಹಳ್ಳಿ, ಕೊಡಿಯಾಲ, ಬಿಲ್ಲೇಪಾಳ್ಯ, ಕೊಮ್ಮನಹಳ್ಳಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.