ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಭಾರಿ ಪ್ರತಿಭಟನೆ

Mainashree
Updated On : 28 Nov 2013, 10:58 am

ಕನ್ನಡಪ್ರಭ ವಾರ್ತೆ  ತುಮಕೂರು  ನ.28
ರೈತ ವಿಠಲ ಅರಬಾವಿ ಆತ್ಮಹತ್ಯೆಗೆ ಕಾಂಗ್ರೆಸ್ ಸರ್ಕಾರದ ಧೋರಣೆಯೇ ಕಾರಣ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಘಟಕಕ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿದರು.
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.   ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಮತ್ತು ಜಿಲ್ಲಾಧ್ಯಕ್ಷ ಹೆಚ್.ಬಿ. ಸಿದ್ದರಾಮಯ್ಯ ಹರವೇಸಂದ್ರ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.  ಇದೇ ವೇಳೆ ಮೃತ ರೈತ ವಿಠಲ ಅರಬಾವಿಗೆ ಶ್ರದ್ಧಾಂಜಲಿ ಮೂಲಕ ನಮನ ಅರ್ಪಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಬಿ. ನಂದೀಶ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಜಯರಾಜ್, ತುರುವೇಕೆರೆ ರೈತರಾದ ಶಿವಸೇನೆ ರಾಮಚಂದ್ರ ಮತ್ತಿತರರು, ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ರೈತ ವಿರೋಧಿ ನಿಲವು ತಳೆದಿದೆ. ಸರ್ಕಾದ ಬೇಜವಾಬ್ದಾರಿತನದ ಧೋರಣೆಯಿಂದಾಗ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಯಿತು ಎಂದು ಖಂಡಿಸಿದರು.
ಸಿಎಂ ವಿರುದ್ಧ ಆಕ್ರೋಶ: ರಾಜ್ಯದ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ದರ ನಿಗದಿಗೊಳಿಸುವುದು ಮತ್ತು ವಿವಿಧ ಬೇಡಿಕೆಗೆಗಳಿಗೆ ಸ್ಪಂದಿಸದಿರುವ ನಿಲುವುಗಳನ್ನು ಉಗ್ರವಾಗಿ ಖಂಡಿಸಿದರು. ಮೃತ ರೈತ ವಿಠಲ ಅರಬಾವಿ ಕುಟುಂಬಕ್ಕೆ ಸೂಕ್ತ ಆರ್ಥಿಕ ನೆರವು ಮತ್ತು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಆಗ್ರಹಿಸಿ, ರೈತ ಸಮುದಾಯ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿ, ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಆಗ್ರಹಿಸಿತು.
ಬಿಜೆಪಿ ರೈತ ಮೋರ್ಚಾ ಜಿಲ್ಲಾಧಿಕಾರಿಗಳ ಮೂಲಕ, ರಾಜ್ಯಪಾಲರಿಗೆ ಮನವಿ ಪತ್ರ ಅರ್ಪಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement