ತಲಕಾಡು: ವಿಶೇಷ ಸಾರಿಗೆ ವ್ಯವಸ್ಥೆ
ತುಮಕೂರು: ಡಿಸೆಂಬರ್ 4 ರಂದು ಬೆಳಿಗ್ಗೆ 6.30 ಘಂಟೆಗೆ ಹಾಗೂ ಮಧ್ಯಾಹ್ನ 1 ಗಂಟೆಗೆ ನಿಗಮದ ವತಿಯಿಂದ ತುಮಕೂರಿನಿಂದ ತಲಕಾಡಿನಲ್ಲಿರುವ ಪಂಚಲಿಂಗ ದರ್ಶನಕ್ಕಾಗಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಭಕ್ತಾದಿಗಳು ಸದರಿ ಸಾರಿಗೆಗಳ ಉಪಯೋಗವನ್ನು ಪಡೆದುಕೊಳ್ಳುವಂತೆ ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ತಿಪಟೂರು: ಮದ್ಯ ನಿಷೇಧ
ತಿಪಟೂರು ನಗರದ ಶ್ರೀ ಸತ್ಯಗಣಪತಿ ಮೂರ್ತಿಯ ವಿಸರ್ಜನಾ ಮಹೋತ್ಸವದ ಪ್ರಯುಕ್ತ ತಿಪಟೂರು ತಾಲೂಕಿನಾದ್ಯಂತ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮದ್ಯ ನಿಷೇಧವು ಡಿಸೆಂಬರ್ 2 ರ ಬೆ.6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಕಾಲಾವಕಾಶ ವಿಸ್ತರಣೆ
ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2014 ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ನೀಡಲಾಗಿದ್ದ ಕಾಲಾವಕಾಶವನ್ನು ಡಿಸೆಂಬರ್ 6 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಈ ಅವಕಾಶದ ಉಪಯೋಗವನ್ನು ಪಡೆದುಕೊಂಡು ಡಿಸೆಂಬರ್ 6 ರೊಳಗಾಗಿ ನಿಗದಿತ ನಮೂನೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ.