ಲೋಕಸಭೆ ಚುನಾವಣೆ: ಕಾಂಗ್ರೆಸ್ ಟಿಕೆಟ್ಗೆ ಜಯಚಂದ್ರ ಪುತ್ರ ಅರ್ಜಿ
ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ವೀಕ್ಷಕರ ಸಭೆಯಲ್ಲಿ ಲೋಕಸಭಾ ಟಿಕೆಟ್ ಆಕಾಂಕ್ಷಿಗಳಾಗಿ ಮಾಜಿ ಶಾಸಕ ಎಸ್.ಪಿ. ಮುದ್ದಹನುಮೇಗೌಡ, ಜಿ. ಜಯರಾಮಯ್ಯ, ಸಚಿವ ಜಯಚಂದ್ರ ಪುತ್ರ ಸಂತೋಷ್ ಜಯಚಂದ್ರ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್. ರಾಜೇಂದ್ರ ಹಾಗೂ ಗೋವಿಂದರಾಜು ಅರ್ಜಿ ಸಲ್ಲಿಸಿದರು.
ಸಭೆಯಲ್ಲಿ ವೀಕ್ಷಕರಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಿಮಾ ಪಾಟೇಲ್, ರಾಜ್ಯ ಎಸ್ಟಿ ಘಟಕದ ಅಧ್ಯಕ್ಷ ಮಂಜುನಾಥ್, ರಾಜ್ಯ ಕಾನೂನು ಘಟಕದ ಅಧ್ಯಕ್ಷ ಧನಂಜಯ್ ಹಾಗೂ ಜಿಲ್ಲಾ ಅಧ್ಯಕ್ಷ ಷಫಿ ಅಹಮದ್, ನಗರ ಕ್ಷೇತ್ರದ ಶಾಸಕ ಡಾ.ಎಸ್. ರಫೀಕ್ ಅಹಮದ್, ಮಾಜಿ ಶಾಸಕ ಆರ್. ನಾರಾಯಣ್ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು