ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನ
ತಿಪಟೂರು: 2013-14ನೇ ಸಾಲಿನಲ್ಲಿ ಪ್ರೌಢಶಾಲೆ (1ರಿಂದ 10ನೇ ತರಗತಿ)ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಢಿಢಿಢಿ.ಡಢಿ.್ಞಛ್ಠ.ಟ್ಝ್ಛಿ.್ಝಟಿ ಮುಖಾಂತರ ಆನ್ಲೈನ್ನಲ್ಲಿ ಸೆ.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಬೇರೆ ಯಾವುದೇ ಸ್ವರೂಪದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ವಿದ್ಯಾರ್ಥಿ ವೇತನ ಜಮೆ ಮಾಡಲು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಖಾತೆ ಹೊಂದಿರಬೇಕು. ವಿದ್ಯಾರ್ಥಿಯು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ನಿಗದಿತ ಕೊನೆ ದಿನಾಂಕ ಮುಕ್ತಾಯಗೊಂಡ ನಂತರ ಆನ್ಲೈನ್ ಅರ್ಜಿಯು ಲಾಕ್ ಆಗುವುದರಿಂದ ಕೊನೆ ದಿನಾಂಕದವರೆಗೆ ಕಾಯದೆ ಅರ್ಜಿಯನ್ನು ಸಲ್ಲಿಸಬೇಕು. ಇತ್ತೀಚಿನ ಭಾವಚಿತ್ರವನ್ನು ಅಪ್ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದು.