ಇಂದು ಮಹಿಳೆಯರ ಸಂರಕ್ಷಣೆ ಕಾಯ್ದೆ ಕುರಿತ ಜಾಗೃತಿ ಶಿಬಿರ
ತಿಪಟೂರು: ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಕೀಲರ ಸಂಘ, ಆರೋಗ್ಯ ಇಲಾಖೆ ಮತ್ತಿತರ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಕುರಿತ ಜಾಗೃತಿ ಶಿಬಿರ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಹಿಂಡಿಸ್ಕೆರೆ ಗ್ರಾ.ಪಂ. ಆವರಣದಲ್ಲಿ ಬುಧವಾರ ಬೆಳಿಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಜಿ.ಪಂ. ಸದಸ್ಯ ಆನಂದರವಿ ನೆರವೇರಿಸಲಿದ್ದು, ಅಧ್ಯಕ್ಷತೆ ಗ್ರಾ.ಪಂ. ಅಧ್ಯಕ್ಷೆ ರೇಣುಕಮ್ಮ ವಹಿಸಲಿದ್ದಾರೆ.