ಇಂದು ರಾಷ್ಟ್ರೀಯ ಪೌಷ್ಟಿಕ ಸಪ್ತಾಹ
ತಿಪಟೂರು: ತಾಲೂಕಿನ ನೊಣವಿನಕೆರೆಯ ಸ್ತ್ರೀ ಶಕ್ತಿ ಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಕೀಲರ ಸಂಘ, ಆರೋಗ್ಯ ಇಲಾಖೆ ಮತ್ತಿತರ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಕುರಿತ ಜಾಗೃತಿ ಶಿಬಿರ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರವನ್ನು ಗುರುವಾರ ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ. ಶಾಸಕ ಕೆ. ಷಡಕ್ಷರಿ ಉದ್ಘಾಟನೆ ನೆರವೇರಿಸಲಿದ್ದು, ಗ್ರಾಪಂ ಅಧ್ಯಕ್ಷೆ ಕಮಲಮ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲೆ ಶೋಭಾದೇವಿ, ಜಿ.ಪಂ ಸದಸ್ಯೆ ರಾಧಾನಾರಾಯಣಗೌಡ, ವೈದ್ಯಾಧಿಕಾರಿ ಡಾ.ಸುಪ್ರಿಯಾ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.