ಹಾಸ್ಟೆಲ್ಗೆ ದಿಢೀರ್ ಭೇಟಿ, ಪರಿಶೀಲನೆ
ಪಾವಗಡ: ಹಾಸ್ಟೆಲ್ ಸಮರ್ಪಕ ನಿರ್ವಹಣೆ ಲೋಪ ಆರೋಪ ಹಿನ್ನಲೆಯಲ್ಲಿ ಬುಧವಾರ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚೌಧರಿ ತಾಲೂಕಿನ ಪಳ್ಳವಳ್ಳಿ ಎಸ್ಸಿ ಎಸ್ಟಿ ಪ್ರೌಢಶಾಲಾ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸಮರ್ಪಕ ಶೌಚಾಲಯಗಳ ನಿರ್ವಹಣೆ ಸೇರಿದಂತೆ ನಿಯಮನಸಾರ ಉಟ ಹಾಗೂ ವಸತಿ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚೌಧರಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಹಾಸ್ಟೆಲ್ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿದೆ. ನಿಲಯ ಪಾಲಕ ರಾಜ್ಕುಮಾರ್ ಬಗ್ಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು. ಹಾಸ್ಟೆಲ್ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ನಿವಾರಿಸಿರುವುದಾಗಿ ತಿಳಿಸಿದರು.