ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸೀಮೆಎಣ್ಣೆ ಪಡೆಯಲು ಆಧಾರ್ ಕಾರ್ಡ್ ಸಂಗ್ರಹಣೆ

Mainashree
Updated On : 5 Sept 2013, 11:00 am

ತುಮಕೂರು: ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಸಾರ್ವಜನಿಕರ ಪಡಿತರ ವಿತರಣೆ ವ್ಯವಸ್ಥೆಯಡಿ ಪಡಿತರ ಸೀಮೆಎಣ್ಣೆ ಪಡೆಯಲು ತುಮಕೂರು ಜಿಲ್ಲೆಯ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಂದ ಆಧಾರ ಕಾರ್ಡ್‌ನ ಸಂಖ್ಯೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ನ್ಯಾಯಬೆಲೆ ಅಂಗಡಿಯವರು ಮತ್ತು ಚಿಲ್ಲರೆ ಸೀಮೆಎಣ್ಣೆ ವಿತರಕರು ಸೀಮೆಎಣ್ಣೆಯನ್ನು ವಿತರಿಸುವ ವೇಳೆಯಲ್ಲಿ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಸೂಚಿಸಲಾಗಿದ್ದು, ಗ್ಯಾಸ್ ಸಂಪರ್ಕ ಪಡೆಯದಿರುವವರಿಗೆ ಪಡಿತರ ಸೀಮೆಎಣ್ಣೆ ನೀಡಲಾಗುತ್ತಿದೆ. ಅನಿಲರಹಿತ ಪಡಿತರ ಚೀಟಿ ಹೊಂದಿದ ಕುಟುಂಬದ ಸದಸ್ಯರ ಪೈಕಿ 18 ವರ್ಷ ಮೇಲ್ಪಟ್ಟ ಮಹಿಳಾ ಸದಸ್ಯರು ತಮ್ಮ ಆಧಾರ ಸಂಖ್ಯೆಯನ್ನು ನೀಡದೇ ಇರುವವರಿಗೆ ಅಕ್ಟೋಬರ್ ತಿಂಗಳಲ್ಲಿ ಸೀಮೆಎಣ್ಣೆಯನ್ನು ಸ್ಥಗಿತಗೊಳಿಸಲಾಗುವುದೆಂದು ತಿಳಿಸಿದೆ.
ಸೆಪ್ಟೆಂಬರ್ ತಿಂಗಳಿಗೆ ಎ.ಪಿ.ಎಲ್. ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ಹಂಚಿಕೆ ಇರುವುದಿಲ್ಲ.  ಬಿ.ಪಿ.ಎಲ್. ಮತ್ತು ಅಂತ್ಯೋದಯ ಅನ್ನ ಯೋಜನೆಯ ಅನಿಲರಹಿತ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸಲಾಗುವುದು.
ಜಿಲ್ಲೆಯಾದ್ಯಂತ ಪಡಿತರ ಸೀಮೆಎಣ್ಣೆಗೆ ಪ್ರತಿ ಲೀಟರ್‌ಗೆ ರು.16.20 ಪೈಸೆ ದರವನ್ನು ಸರ್ಕಾರವು ನಿಗದಿಪಡಿಸಿದ್ದು, ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಹಣವನ್ನು ನ್ಯಾಯಬೆಲೆ ಅಂಗಡಿಯವರು ಪಡೆದಲ್ಲಿ ಅಥವಾ ನಿಗದಿಪಡಿಸಿದ್ದಕ್ಕಿಂತ ಕಡಿಮೆ ಪ್ರಮಾಣ ವಿತರಣೆ ಮಾಡಿದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಯವರ ವಿರುದ್ದ ಸಂಬಂಧಿಸಿದ ತಾಲೂಕಿನ ತಹಸೀಲ್ದಾರ್ ಅವರ ಕಚೇರಿಗೆ ಹಾಗೂ ಸಹಾಯಕ ನಿರ್ದೇಶಕರು, ಅನೌಪಚಾರಿಕೆ ಪಡಿತರ ಕಚೇರಿ, ತುಮಕೂರು ಇವರಿಗೆ ದೂರನ್ನು ನೀಡಲು ಕೋರಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement