ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಉತ್ತಮ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯ'

Rashmi Kasaragodu
Updated On : 7 Sept 2013, 12:54 pm

ಹುಳಿಯಾರು: ಪ್ರಸ್ತುತ ಸಮಾಜಲ್ಲಿ ಭ್ರಷ್ಟಾಚಾರ, ಲಂಚಗುಳಿತನ ಸೇರಿದಂತೆ ಅನೇಕ ಸಮಸ್ಯೆಗಳು ದೇಶದ ಅಭಿವೃದ್ಧಿಗೆ ಮಾರಕವಾಗಿವೆ. ಇಂತಹ ಸಮಾಜಕಂಠಕ ಪಿಡುಗುಗಳು ನಿರ್ಮೂಲನೆಯಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಅದಕ್ಕಾಗಿ ಇಂದಿನ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜಕಟ್ಟುವ ಕಾರ್ಯದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವುದು ಬಹುಮುಖ್ಯವೆಂದು ಪ್ರಾಂಶುಪಾಲ ಆರ್.ಮೂಗೇಶಪ್ಪ ಕಿವಿಮಾತು ಹೇಳಿದರು. ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಉಪನ್ಯಾಸಕ ಇಬ್ರಾಹಿಂ ಮಾತನಾಡಿ, ಶಿಕ್ಷಕ ಎಂಬಾತ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದರೆ ಸಾಲದು, ನಾಡು,ನುಡಿ, ದೇಶದ ಅಭಿವೃದ್ಧಿ ಎಂದರು. ರಾಧಾಕೃಷ್ಣನ್ ಸೇರಿದಂತೆ ಮಹಾವ್ಯಕ್ತಿಗಳು ನಡೆದು ಬಂದ ದಾರಿ ಹಾಗೂ ಅವರ ಆದರ್ಶಗಳ ಬಗ್ಗೆ ತಿಳಿಸಿದರು. ಉಪನ್ಯಾಸಕರಾದ ಎಸ್. ಶಂಕರಲಿಂಗಯ್ಯ, ಶ್ರೀನಿವಾಸ್, ಅಶೋಕ್, ಹನುಮಂತಪ್ಪ, ಚಂದ್ರಮೌಳಿ, ಶಿವಯ್ಯ, ಜಯಪ್ರಕಾಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement