ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸರ್ಕಾರ ಶಿಕ್ಷಕ ಗೀತೆಯನ್ನು ರಚಿಸಲಿ

Rashmi Kasaragodu
Updated On : 7 Sept 2013, 12:55 pm

ಗುಬ್ಬಿ: ಸರ್ಕಾರ ಶಿಕ್ಷಕ ಗೀತೆಯನ್ನು ರಚಿಸಿ ಸಮಸ್ತ ಶಿಕ್ಷಕರಿಗೆ ಗೌರವ ನೀಡುವಂತಹ ಕಾರ್ಯವನ್ನು ಮಾಡಬೇಕೆಂದು ತುಮಕೂರು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿಯ ಸಹಯೋಗದಲ್ಲಿ ಏರ್ಪಡಿಸಿದ್ದ ಸರ್ವಪಲ್ಲಿ ಡಾ. ಎಸ್.ರಾಧಾಕೃಷ್ಣನ್ರ ಜಯಂತ್ಯುತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಯಾವುದೇ ರಾಷ್ಟ್ರ ಸರ್ವಾಂಗೀಣವಾಗಿ ಅಭಿವೃದ್ಧಿಯಾಗಬೇಕಾದರೆ ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಸಾಧ್ಯವಾಗಿದ್ದು ಶಿಕ್ಷಕ ಸಮುದಾಯ ಸೇವಾಮನೋಭಾವನೆಯಿಂದ ಸೇವೆಸಲ್ಲಿಸಿದಾಗ ಮಾತ್ರ ಆದರ್ಶ ವಿದ್ಯಾರ್ಥಿಗಳು ರೂಪುಗೊಳ್ಳಲು ಸಾಧ್ಯ ಎಂದರು. ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ಶಿಕ್ಷಕ ವೃತ್ತಿ ಸರ್ವಶ್ರೇಷ್ಠವಾದುದು. ಶಿಕ್ಷಕರು ಸಮಾಜ ಕಟ್ಟುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ ಅವರ ಸೇವೆಯನ್ನು ಇಡೀ ಸಮಾಜ ಗೌರವಯುತವಾಗಿ ಕಾಣುತ್ತಿದೆ. ಎಂದರು. ಇದೇ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಕ್ರೀಢಾ ಹಾಗೂ ಸಾಂಸ್ಕತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಪಟ್ಟಣದ ಶ್ರೀಚನ್ನಬಸವೇಶ್ವರ ಸ್ವಾಮಿ ದೇವಾಲಯದಿಂದ ಡಾ.ರಾಧಾಕೃಷ್ಣನ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು.
ನಿರ್ದೇಶಕರಾಗಿ ಆಯ್ಕೆ
ತಿಪಟೂರು:  ತಾಲೂಕಿನ ಸೂಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2013-18ನೇ ಸಾಲಿನವರೆಗಿನ ಐದು ವರ್ಷಗಳ ಆಡಳಿತಾವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದಬಸವಯ್ಯ ಮತ್ತು ಎಸ್.ದೇವರಾಜು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಸಚಿವರ ಜಿಲ್ಲಾ  ಪ್ರವಾಸ
ತುಮಕೂರು: ವೈದ್ಯಕೀಯ ಶಿಕ್ಷಣ ರಾಜ್ಯ ಸಚಿವರು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಇದೇ ತಿಂಗಳ 7 ರಂದು ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಸೆ.7ರಂದು ಬೆ.9.30 ಕ್ಕೆ ತುಮಕೂರಿಗೆ ಆಗಮಿಸುವ ಸಚಿವರು ಬೆ.10.30 ಕ್ಕೆ ಅಗಲಕೋಟೆಯ ಡಾ. ಹೆಚ್.ಎಂ. ಗಂಗಾಧರಯ್ಯ ಸ್ಮಾರಕಭವನದಲ್ಲಿ ಶ್ರೀ ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಸಂಸ್ಥೆ ವತಿಯಿಂದ ಏರ್ಪಡಿಸಿರುವ  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ತುಮಕೂರಿನಿಂದ  ಬೆಂಗಳೂರಿಗೆ ಹಿಂದಿರುಗುವರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement