'ವಿಶ್ವವ್ಯಾಪಿ ಸೇವೆಯೇ ರೆಡ್ಕ್ರಾಸ್ ಧ್ಯೇಯ'
ಚಿಕ್ಕನಾಯಕನಹಳ್ಳಿ: ರೆಡ್ಕ್ರಾಸ್ ಸಂಸ್ಥೆ ಈಗ ವಿಶ್ವದೆಲ್ಲೆಡೆ ತನ್ನ ಸೇವೆಯನ್ನು ವಿಸ್ತರಿಸಿದೆ ಎಂದು ಗುಬ್ಬಿ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್ ನುಡಿದರು.
ಅವರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಯುವ ರೆಡ್ಕ್ರಾಸ್ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ರೆಡ್ಕ್ರಾಸ್ ಯುವಘಟಕದ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಕಾಲೇಜಿನ 778 ವಿದ್ಯಾರ್ಥಿಗಳು ಸದಸ್ಯರಾಗಿ ಯುವ ಘಟಕದ ಮೂಲಕ ನಿಮ್ಮ ಸೇವೆಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದರು.
ಉದ್ಘಾಟನೆ ಮಾಡಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ವರದರಾಜು ಮಾತನಾಡಿ ಯುವಕರು ಯುದ್ಧ ಮತ್ತು ಪ್ರಕೃತಿ ವಿಕೋಪಗಳ ಸಮಯದಲ್ಲಿ , ತಾಯಿ ಹಾಗೂ ಮಗುವಿನ ಆರೋಗ್ಯ ನಿರ್ವಹಣೆಯಲ್ಲಿ ರಕ್ತ ನಿಧಿಗಾಗಿ ಸ್ವಯಂ ಪ್ರೇರಿತರಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಳ್ಳುವುದು ಮತ್ತು ರೋಗಗ್ರಸ್ಥರಿಗೆ, ನೊಂದವರಿಗೆ ನೈತಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದರು.
ಉಪನ್ಯಾಸಕರಾದ ಸುರೇಶ್, ಶಿವರಾಮಯ್ಯ, ಚಂದ್ರಶೇಖರ್ ಬಸವರಾಜು ಹಾಗೂ ದರ್ಶಿನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರೆಡ್ಕ್ರಾಸ್ ಯುವ ಘಟಕದ ಅಧಿಕಾರಿ ಶಿವಲಿಂಗಮೂರ್ತಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ಟಿ.ಆರ್. ಪಲ್ಲವಿ ಪ್ರಾರ್ಥಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿಯೇ ರೆಡ್ಕ್ರಾಸ್ ಸಂಸ್ಥೆಯ ಧ್ಯೇಯೋದ್ದೇಶವನ್ನು ಪಾಲಿಸುವ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.