ಹಣ್ಣು, ಬ್ರೆಡ್ ವಿತರಿಸುವ ಮೂಲಕ ಶಿಕ್ಷಕರ ದಿನಾಚರಣೆ
ಕ,ಪ್ರ,ವಾರ್ತೆ ಮಧುಗಿರಿ ಸೆ.8
ತಾಲೂಕಿನ ಬ್ಯಾಲ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆ ಪ್ರಯುಕ್ತ ಬ್ಯಾಲ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿದರು.
ಈ ರೀತಿ ಸಮಾಜಮುಖಿಯಾಗಿ ಕೆಲಸ ಮಾಡಲು ಚಿಕ್ಕ ವಯ್ಯಸ್ಸಿನಲ್ಲೇ ಮಕ್ಕಳನ್ನು ಹಚ್ಚಿದಾಗ ವಿದ್ಯಾರ್ಥಿ ಜೀವನದಲ್ಲಿ ಆತ್ಮವಿಶ್ವಾಸ ವೃದ್ಧಿಯಾಗಿ ಸಮಾಜದಲ್ಲಿ ಜವಾಬ್ದಾರಿ ಹೆಚ್ಚುತ್ತದೆ ಎಂದು ಬ್ಯಾಲ್ಯ ವೈದ್ಯಾಧಿಕಾರಿ ಭಾನುಪ್ರಕಾಶ್ ವಿದ್ಯಾರ್ಥಿಗಳ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಶಿಕ್ಷಕ ಟಿ.ಅಶ್ವತ್ಥಯ್ಯ, ಶಿಕ್ಷಕರಾದ ನರಸಿಂಹಮೂರ್ತಿ, ಆರ್.ಕಾಮರಾಜು, ಗೋವಿಂದಯ್ಯ, ದೊಡ್ಡನಾಗಪ್ಪ ಹಾಗೂ ವಿದ್ಯಾರ್ಥಿಗಳು ಇದ್ದರು.