ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ
ಭಾರತೀನಗರ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸಮೀಪದ ಗುಡಿಗೆರೆ, ಸುಣ್ಣದದೊಡ್ಡಿ, ತಿಟ್ಟಮಾರನಹಳ್ಳಿ ಸೇರಿದಂತೆ ಇತರೆ ಗ್ರಾಮದ ರೈತರು ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ 1 ವಾರದಿಂದ ಸಮರ್ಪಕ ವಿದ್ಯುತ್ ಪೂರೈಕೆಯಾಗದ ಕಾರಣ ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ. ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳು ರಾತ್ರಿಯ ಸಮಯದಲ್ಲಿ ತಿರುಗಾಡಲು ಭಯಪಡುವಂತಾಗಿದೆ ಎಂದು ದೂರಿದರು. ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿದ್ದಲ್ಲಿ ಉಗ್ರಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಗ್ರಾಮದ ಎಸ್. ಲಿಂಗೇಗೌಡ, ಎಸ್. ಸ್ವಾಮಿ, ನಟರಾಜು, ರಾಜೇಗೌಡ, ಬೋರೇಗೌಡ, ಶಿವರುದ್ರ, ತಿಮ್ಮೇಗೌಡ, ಬಸವರಾಜು, ಬಸವೇಗೌಡ, ಪಟೇಲ್ ಬೋರೇಗೌಡ, ಕಾಳೇಗೌಡ ಆಗ್ರಹಿಸಿದರು.