ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಪ್ರತಿಭಟನೆ

Rashmi Kasaragodu
Updated On : 5 Apr 2014, 2:22 am

ಗುಬ್ಬಿ: ಕಳೆದ ಹಲವು ದಿನಗಳಿಂದ ಅಸಮರ್ಪಕ ವಿದ್ಯುತ್ನಿಂದಾಗಿ ಕುಡಿಯುವ ನೀರಿಗೂ ಪರಿತಪಿಸುವಂತಹ
ಸ್ಥಿತಿ ನಿರ್ಮಾಣವಾಗಿದ್ದು ಬೇರೆ ಕಡೆ ಸರಬರಾಜು ಮಾಡುವಂತೆ ಕನಿಷ್ಠ ಪಕ್ಷ 7 ಗಂಟೆಯಾದರೂ  ವಿದ್ಯುತ್ ಪೂರೈಕೆ ಮಾಡಬೇಕೆಂದು ಒತ್ತಾಯಿಸಿ ತಾಲೂಕಿನ ಹೇರೂರು, ಕಿಟ್ಟದಕುಪ್ಪೆ, ಹೊದಲೂರು ಮತ್ತು ಅಂಬಾರಪುರ ಗ್ರಾಮದ ರೈತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.
ತಾಲ್ಲೂಕು ಪಂಚಾಯ್ತಿ ಸದಸ್ಯ ಸೋಮೇಶ್ ಮನವಿ ಪತ್ರ ಸಲ್ಲಿಸಿ ಮಾತನಾಡಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಓದುವ ವಿದ್ಯಾರ್ಥಿಗಳಿಗೆ ಹಾಗೂ ಕುಡಿಯುವ ನೀರಿಗೂ ಹಾಹಾಕಾರವಾಗಿದ್ದು ಇದರ ಬಗ್ಗೆ ತಲೆಕೆಡಿಸಿಕೊಳ್ಳದ ಅಧಿಕಾರಿಗಳು ನಮ್ಮನ್ನು ನಿರ್ಲಕ್ಷಿಸುತ್ತಿದ್ದು ಇದು ಹೀಗೆ ಮುಂದುವರಿದರೆ ಕಚೇರಿಯ ಮಂದೆ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಸಮರ್ಪಕ ವಿದ್ಯುತ್ಪೂರೈಕೆಯಿಂದಾಗಿ ಕನಿಷ್ಟ ಒಂದು ಗಂಟೆಯು ಸಹ ನಿರಂತರವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಮಕ್ಕಳಿಗೆ ಪರಿಕ್ಷೆ ಆರಂಭವಾಗಿದ್ದು ಪರಿಕ್ಷೆಗೆ ಓದಿಕೊಳ್ಳಲು ಕೂಡ ಸಾದ್ಯವಾಗದೆ ದೀಪದ ಬೇಳಕಿನಲ್ಲಿ ಒದುವ ಸ್ಥಿತಿ ನಿರ್ಮಾಣವಾಗಿದೆ. ಬೆಸ್ಕಾಂ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮಕೈಗೊಳ್ಳದಿದ್ದರೆ ಮತ್ತಷ್ಟು ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement