ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕೊರಟಗೆರೆಗೆ ಡಾ.ಜಿ.ಪರಮೇಶ್ವರ್ ನಾಳೆ

Rashmi Kasaragodu
Updated On : 5 Apr 2014, 2:19 am

ಕೊರಟಗೆರೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಭಾಗವಹಿಸಲು ಏ.6 ರಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದಾರೆ. ಕಳೆದ ವಿಧಾನ ಸಭಾ ಚುನಾವಣೆಯ ನಂತರ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಆಗಮಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರ ಪರವಾಗಿ ಮತಯಾಚನೆ ಮಾಡಲು ಮತ್ತು ಕಾರ್ಯಕರ್ತ, ಮುಖಂಡರ ಸಭೆಯನ್ನು ಅಂದು ಬೆಳಿಗ್ಗೆ 9.30 ಕ್ಕೆ ಇತಿಹಾಸ ಪ್ರಸಿದ್ಧ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿಗೆ ಪುಜೆ ಸಲ್ಲಿಸುವ ಮೂಲಕ ಹೊಳವನಹಳ್ಳಿ ಹೋಬಳಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲ್ಲಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement