ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸಿದ್ದರಾಮಯ್ಯ ಕೈಕಾಲು ಕಟ್ಟಿ ಹಾಕಲಾಗಿದೆ: ಜಿಎಸ್ಬಿ

Rashmi Kasaragodu
Updated On : 5 Apr 2014, 2:19 am

ತುಮಕೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶಿಷ್ಟ ಚೇತನ, ವಿಶಿಷ್ಟ ಮುಖ್ಯಮಂತ್ರಿ ಎಂದು ಬಣ್ಣಿಸಿದ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಅವರ ಕೈಕಾಲುಗಳನ್ನು ಕಟ್ಟಿಹಾಕಿದ್ದಾರೆ ಎಂದು ಆರೋಪಿಸಿದರು.
ಅವರು ತುಮಕೂರಿನ ಗ್ರಾಮಾಂತರದ ಹೆಬ್ಬೂರಿನಲ್ಲಿ ಏರ್ಪಾಟಾಗಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕ ದಿಗ್ವಿಜಯ್ಸಿಂಗ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿಯ ಅವರು ಸಿದ್ದರಾಮಯ್ಯ ಅವರ ಕೈಕಾಲುಗಳನ್ನು ಕಟ್ಟಿಹಾಕಿದ್ದಾರೆ. ಚುನಾವಣೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಖಚಿತ ಎಂದು ಭವಿಷ್ಯ ನುಡಿದರು.
ತಮ್ಮ ಬಗ್ಗೆ ಅವಹೇಳನ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಕಟುವಾದ ಶಬ್ದಗಳಿಂದ ತರಾಟೆಗೆ ತೆಗೆದುಕೊಂಡ ಬಸವರಾಜು, ಸುಳ್ಳು ಆರೋಪಗಳನ್ನು ಮಾಡುವುದನ್ನು ನಿಲ್ಲಿಸದೇ ಇದ್ದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಲೀಲೆಗಳನ್ನು ಜನರ ಮುಂದಿಡಬೇಕಾಗುತ್ತದೆ. ಆಗ ಕಾಂಗ್ರೆಸ್ ಅಭ್ಯರ್ಥಿ ಮನೆಬಿಟ್ಟು ಹೊರಬರಲಾಗದ ಪರಿಸ್ಥಿತಿ ಉಂಟಾಗುತ್ತದೆ ಎಂದು ಎಚ್ಚರಿಸಿದರು.
ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಮಾತನಾಡಿ, ಈ ಚುನಾವಣೆ ತಮ್ಮ ಪ್ರತಿಷ್ಠೆಯಾಗಿದ್ದು,  ಬಸವರಾಜು ಅವರನ್ನು ಗೆಲ್ಲಿಸುವುದು ಖಚಿತ ಎಂದರು.
ಬಸವರಾಜು ಗೆಲವು ಶತಸಿದ್ಧ. ಅದರಂತೆ ಮೋದಿ ಪ್ರಧಾನಿಯಾಗುವುದು, ಬಸವರಾಜು ಕೇಂದ್ರ ಸಚಿವರಾಗುವುದು ಶತಸಿದ್ಧ. ಆ ಕಾರ್ಯಕ್ರಮಕ್ಕೆ ಎರಡು ರೈಲುಗಳಲ್ಲಿ ಜಿಲ್ಲೆಯಿಂದ ಪಕ್ಷದ ಕಾರ್ಯಕರ್ತರನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement