ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅನುಮತಿ ಪಡೆಯದ ಅಕ್ರಮ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ

Rashmi Kasaragodu
Updated On : 6 Apr 2014, 1:21 am

ಕುಣಿಗಲ್: ತಾಲೂಕಿನಲ್ಲಿ ಅಕ್ರಮ ಶಾಲೆಗಳು ಪ್ರಾರಂಭವಾಗಿದ್ದಲ್ಲಿ ಅವುಗಳ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಈಶ್ವರಯ್ಯ ತಿಳಿಸಿದರು. ಶನಿವಾರ ಕಲ್ಲುಪಾಳ್ಯ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಖಾಸಗಿ ವಿದ್ಯಾಸಂಸ್ಥೆಯೊಂದು ಅನುಮತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಯ್ಯ ಅವರಿಗೆ ಸ್ಥಳ ಪರಿಶೀಲನೆ ಮಾಡಿ, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುಗಾಗಿ ತಿಳಿಸಿದರು.  ಸಾರ್ವಜನಿಕ ಶಿಕ್ಷಣ ಇಲಾಖೆಯು ಸಾರ್ವಜನಿಕರ ಯಾವುದೇ ರೀತಿಯ ಸಮಸ್ಯೆಗೆ ಸ್ಪಂದಿಸಿದಾಗ ಸಮಸ್ಯೆಗಳು ಇತ್ಯರ್ಥಗೊಂಡು  ಇಲಾಖೆ ಮೇಲೆ ಉತ್ತಮ ಅಭಿಪ್ರಾಯ ಮೂಡಲು ಸಹಕಾರಿಯಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement