ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ವಿರುದ್ಧ ಎಚ್.ಡಿ.ಎಲ್ಲಪ್ಪ ಗರಂ

Rashmi Kasaragodu
Updated On : 6 Apr 2014, 1:20 am

ಗುಬ್ಬಿ: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಬಗ್ಗೆ ಮನಬಂದಂತೆ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕುದ್ದಲ್ಲ ಕೂಡಲೇ ಅವರು ತಮ್ಮ ಹೇಳಿಕೆ ಹಿಂಪಡೆಯಬೇಕೆಂದು ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಡಿ.ಎಲ್ಲಪ್ಪ ಆಗ್ರಹಿಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಬೇರೆ ಪಕ್ಷದವರ ಬಗ್ಗೆ ಮಾತನಾಡುವಾಗ ಮಾತಿನ ಬಗ್ಗೆ ಅರಿವಿರಬೇಕು. ಅದರಲ್ಲೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಕಳೆದುಕೊಂಡಿರುವ ಪರಮೇಶ್ವರ್ ಹತಾಶೆಯಿಂದ ಮಾತನಾಡಿದ್ದಾರೆ ಎಂದು ಕಿಡಿಕಾರಿದರು. ಜೆಡಿಎಸ್ ತಾಲೂಕು ಉಪಾಧ್ಯಕ್ಷ ಎಚ್.ಡಿ.ರಂಗಸ್ವಾಮಿ, ನಗರ ಘಟಕದ ಯುವ ಜೆಡಿಎಸ್ ಅಧ್ಯಕ್ಷ ಪ್ರಭಾಕರ್, ದುರ್ಗೇಶ್, ಡಿ.ರಘು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement