'ನಾರಿಯರ ರಕ್ಷಣೆಗಾಗಿ ಮೋದಿ ಬೆಂಬಲಿಸಿ'
ಗುಬ್ಬಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳಾ ಮೀಸಲಾತಿ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯರ ಬಗ್ಗೆ ಅಪಾರ ಗೌರವ ಹೊಂದಿರುವ ಮತ್ತು ಮಹಿಳೆಯರ ಹಿತ ಕಾಯುವಂತಹ ನರೇಂದ್ರ ಮೋದಿ ಅವರಿಗೆ ಪ್ರಸಕ್ತ ಚುನಾವಣೆಯಲ್ಲಿ ಸಂಪೂರ್ಣ ಸಹಕಾರ ನೀಡುವತ್ತ ಮಹಿಳೆಯರು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನೇಸರ್ಗಿ ಕರೆ ನೀಡಿದರು.
ಪಟ್ಟಣದ ವಾಸವಿ ಕಲ್ಯಾಣ ಮಂದಿರದಲ್ಲಿ ಬಿಜೆಪಿ ಘಟಕ ಆಯೋಜಿಸಿದ್ದ ಗುಬ್ಬಿ ವಿಧಾನ ಸಭಾ ಕ್ಷೇತ್ರದ ಮಹಿಳಾ ಘಟಕದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಬಿಜೆಪಿ ಮಹಿಳಾ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯೆ ಪದ್ಮಾ ವಿಜಯಕುಮಾರ್, ಮಂಡಳ ಮಹಿಳಾ ಅಧ್ಯಕ್ಷೆ ಶಿವಗಂಗಮ್ಮ, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗರತ್ನಮ್ಮ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರೇಮಾ ಹೆಗಡೆ, ಪ್ರಧಾನ ಕಾರ್ಯದರ್ಶಿ ಅನಿತಾ ನಂಜುಂಡಯ್ಯ ಮತ್ತಿತರರು ಉಪಸ್ಥಿತರಿದ್ದರು.