ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮೋದಿ ಕೈ ಬಲಪಡಿಸಲು ಬಿಜೆಪಿ ಸೇರ್ಪಡೆ: ಜೆ.ಸಿ. ಮಾಧುಸ್ವಾಮಿ

Rashmi Kasaragodu
Updated On : 6 Apr 2014, 1:20 am

ಚಿಕ್ಕನಾಯಕನಹಳ್ಳಿ: ರಾಷ್ಟ್ರದ ಹಿತಾಸಕ್ತಿಗೋಸ್ಕರ ನರೇಂದ್ರ ಮೋದಿ ಅವರ ಕೈ ಬಲಪಡಿಸುವುದು ಅನಿವಾರ್ಯವಾಗಿರುವ ಈ ಸಂದರ್ಭದಲ್ಲಿ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರುವುದಾಗಿ ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ನುಡಿದರು. ಶನಿವಾರ ಪಟ್ಟಣದಲ್ಲಿ ಕರೆದಿದ್ದ ತಮ್ಮ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಗುಜರಾತಿನಲ್ಲಿ ನರೇಂದ್ರ ಮೋದಿಯ ಅಭಿವೃದ್ಧಿ ಇಡೀ ವಿಶ್ವದ ಗಮನ ಸೆಳೆದಿದೆ.ದೇಶ ಇಂದು ಆತಂಕದ ಸ್ಥಿತಿ ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ನಾವು ನಮ್ಮ ವಯಕ್ತಿಕ ಹಿತಾಸಕ್ತಿ ಬದಿಗೊತ್ತಿ, ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.  ತಾಲೂಕು ಕೆಜೆಪಿ ಅಧ್ಯಕ್ಷ ಎಚ್.ಎಂ.ಸುರೇಂದ್ರಯ್ಯ, ಹಳೇಮನೆ ಶಿವನಂಜಪ್ಪ, ಸಿಂಗದಹಳ್ಳಿ ರಾಜಕುಮಾರ್, ಎಪಿಎಸಿ ಅಧ್ಯಕ್ಷ ಶಿವರಾಜ್, ಪುರಸಭೆ ಉಪಾಧ್ಯಕ್ಷೆ ನೇತ್ರಾವತಿ, ತಾಪಂ ಉಪಾಧ್ಯಕ್ಷ ಜಯಣ್ಣಮುಂತಾದವರು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement