ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜೆಡಿಎಸ್ ರೋಡ್ ಶೋ

Rashmi Kasaragodu
Updated On : 7 Apr 2014, 1:08 am

ಕೆ.ಆರ್. ನಗರ: ಕಾಂಗ್ರೆಸ್ ಮತ್ತು ಬಿಜೆಪಿಗಳು ಹುಸಿ ಭರವಸೆಗಳನ್ನು ನೀಡುತ್ತಿದ್ದು, ಇದರಿಂದ ಸಮಸ್ಯೆಗಳಿಗೆ ಪರಿಹಾರ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಕಾವೇರಿ ನೀರಿನ ಸಮಸ್ಯೆ ಸೇರಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿರುವ ಅನೇಕ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಜೆಡಿಎಸ್‌ಗೆ ಮತ ನೀಡಬೇಕೆಂದು ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಮನವಿ ಮಾಡಿದರು.
ತಾಲೂಕಿನ ಹಂಪಾಪುರ ಗ್ರಾಮದಲ್ಲಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಭದ್ರಕೋಟೆಯಾಗಿದ್ದು, ಕಳೆದ ಉಪ ಚುನಾವಣೆಯಲ್ಲಿ ಅತಿಯಾದ ವಿಶ್ವಾಸವೇ ಸೋಲಿಗೆ ಕಾರಣವಾಗಿದೆ. ಆದರೆ ಈ ಬಾರಿ ಪಕ್ಷದ ಕಾರ್ಯಕರ್ತರು ಮುಖಂಡರೊಡನೆ ಸೇರಿ, ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನನ್ನ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಜೆಡಿಎಸ್‌ನಿಂದ ಮಾತ್ರ ಪರಿಹಾರ. ಆದ್ದರಿಂದ ನನಗೆ ಮತ ನೀಡುವಂತೆ ಮನವಿ ಮಾಡಿದ ಅವರು, ಆಯ್ಕೆಯಾದ ನಂತರ ಸ್ಥಳೀಯ ಶಾಸಕ ಸಾ.ರಾ.ಮಹೇಶ್ ಅವರ ಜತೆ ಸೇರಿ ಕೆ.ಆರ್. ನಗರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ದುಡಿಯುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement