ತುರುವೇಕೆರೆಗೆ ಡಿ.ಕೆ.ಶಿವಕುಮಾರ್ ಇಂದು
ತುರುವೇಕೆರೆ: ತಾಲೂಕಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಮಾಡಲು ಸೋಮವಾರದಂದು ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎನ್.ಶಿವರಾಜು, ಕಾಂಗ್ರೆಸ್ ಮುಖಂಡ ಮಸಾಲಾ ಜಯರಾಂ, ಕೆಪಿಸಿಸಿ ಸದಸ್ಯೆ ಗೀತಾ ರಾಜಣ್ಣ ಹಾಗೂ ಚೌದ್ರಿ ರಂಗಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 11 ಗಂಟೆಗೆ ತಾಲೂಕಿನ ಬಾಣಸಂದ್ರಕ್ಕೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಹಾಗೂ ಇತರ ಜಿಲ್ಲಾ ಮುಖಂಡರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬಾಣಸಂದ್ರದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದು ತದ ನಂತರ ತುರುವೇಕೆರೆಗೆ ಆಗಮಿಸಲಿದ್ದಾರೆ. ಕೆ.ಪಿ ಸಿ ಸಿ ಸದಸ್ಯ ಎಸ್.ರುದ್ರಪ್ಪ, ಸಿ ಎಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೆಟ್ಟಸ್ವಾಮಿಗೌಡ, ಜಿಲ್ಲಾ ಪಂಚಾಯ್ತಿ ಸದಸ್ಯ ಉಗ್ರಯ್ಯ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಉಗ್ರೇಗೌಡ, ತಾಲೂಕು ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಹೆಚ್.ಕೆ.ನಾಗೇಶ್, ಹಿರಿಯ ಮುಖಂಡ ಮಾಚೇನಹಳ್ಳಿ ರಾಮಣ್ಣ, ಮಾಜಿ ಜಿ.ಪಂ.ಸದಸ್ಯ ಕೆ.ಬಿ.ಹನುಮಂತಯ್ಯ, ಕೆಂಪೇಗೌಡ, ಬಡಗರಹಳ್ಳಿ ಕೃಷ್ಣಮೂರ್ತಿ, ಕಾರ್ಯದರ್ಶಿ ನಂಜುಂಡಯ್ಯ ಮೊದಲಾದವರು ಉಪಸ್ಥಿತರಿದ್ದರು.