ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕಾಂಗ್ರೆಸ್ ಜಯಭೇರಿ ಖಚಿತ: ಭವ್ಯಾ ಭವಿಷ್ಯ

Srinivasa Murthy VN
Updated On : 9 Apr 2014, 1:06 am
ಕೊರಟಗೆರೆ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ನಟಿ ಭವ್ಯ ಭವಿಷ್ಯ ನುಡಿದರು.
ಅವರು ತುಮಕೂರು ಲೋಕಸಭಾ ವ್ಯಾಪ್ತಿಯ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರ ಪರವಾಗಿ ರೋಡ್ ಶೋ ಮೂಲಕ ಮತ ಯಾಚನೆಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೂಲಕ ಮಹಿಳೆಯರಿಗೆ ಅನೇಕ ಜನೋಪಯೋಗಿ ಯೋಜನೆಗಳನ್ನು ನೀಡಿದ್ದು ಅನ್ನಭಾಗ್ಯ ಯೋಜನೆಯಲ್ಲಿ 180 ರು.ಗಳಿಗೆ ತಿಂಗಳಿಗೆ ಬೇಕಾಗುವಷ್ಟು ಅಕ್ಕಿ, ಗೋಧಿ, ಸಕ್ಕರೆ ದೊರೆಯುಂತೆ ಮಾಡಿ ಕುಟುಂಬ ನೆಮ್ಮದಿಯಾಗಿ ಜೀವನ ನಡೆಸುವಂತೆ ಮಾಡಿದೆ ಎಂದರು.

Advertisement

Advertisement

ಮುಖ್ಯಮಂತ್ರಿಯೊಬ್ಬರು ಭ್ರಷ್ಟಚಾರ ಮಾಡಿ ಜೈಲು ಸೇರಿದ ಸರ್ಕಾರಕ್ಕೆ ಮತ್ತು ಅವರ ಸಂಪುಟದಲ್ಲಿ ಕೆಲ ಮಂತ್ರಿಗಳು  ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿ ಜೈಲು ಸೇರಿದ ಪಕ್ಷಕ್ಕೆ ಮಹಿಳೆಯರು ಮತ ನೀಡುವರೆ ಎಂದ ಅವರು ಮಹಿಳೆಯರಿಗೆ ಮತ್ತು ಬಡವರಿಗೆ ರಕ್ಷಣೆ ನೀಡು ಪಕ್ಷವಾದ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಕಣದಲ್ಲಿರುವ ಕಾಂಗ್ರೆಸ್‌ಗೆ ಪಕ್ಷದ ಉತ್ತಮ ವ್ಯಕ್ತಿಗಳಿಗೆ ಜನತೆ ಎಲ್ಲಾ ಕಡೆ ಬೆಂಬಲ ವ್ಯಕ್ತ ಪಡಿಸುತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 
ಜಯಬೇರಿ ಬಾರಿಸಲಿದೆ ಎಂದರು.
ನಿರ್ಮಾಪಕ ಹಾಗೂ ನಿರ್ದೇಶಕ ಚನ್ನೆಗೌಡ ಮಾತನಾಡಿ ಕಾಂಗ್ರೆಸ್ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಗ್ರಾಮ ಪಂಚಾಯಿತಿ ಮುಖಾಂತರ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಅನುದಾನ ನೀಡುವ ಮೂಲಕ ಅಲ್ಪಸಂಖ್ಯಾತ, ಹಾಗೂ ಹಿಂದುಳಿದ ಜನತೆಗೆ ಆರ್ಥಿಕ ಅಭಿವೃದ್ಧಿಯೊಂದಿಗೆ ರಕ್ಷಣೆ ನೀಡುತ್ತಿರುವ  ಕಾಂಗ್ರೆಸ್ ಪಕ್ಷವನ್ನು ಜನತೆ ಬೆಂಬಲಿಸುವರು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಜಲಜಾನಾಯಕ್, ಕೆಪಿಸಿಸಿ ಏಸ್ಸಿ ಘಟಕದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ  ಅಶೋಕ್ ಕಲಿದೇವರು, ಜಲ್ಲಾ ಅಧ್ಯಕ್ಷ ರಾಮಕೃಷ್ಣಪ್ಪ, ಮುರಳೀಧರ್ ಹಾಲಪ್ಪ ಇನ್ನಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement