ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಚಾರ

Srinivasa Murthy VN
Updated On : 16 Apr 2014, 1:16 am

ಮಧುಗಿರಿ: ಪ್ರಸ್ತುತ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ಕೃಷ್ಣಪ್ಪ ಅವರಿಗೆ  ಮತ ನೀಡುವ ಮೂಲಕ ಗೆಲ್ಲಿಸಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ವಿ. ವೀರಭದ್ರಯ್ಯ ಮತದಾರರಲ್ಲಿ ಮನವಿ ಮಾಡಿದರು.
ಪಟ್ಟಣದ ನೃಪತುಂಗ ರಸ್ತೆ, ಟೌನ್ ಹಾಲ್ ರಸ್ತೆ ಹಾಗೂ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಣ್ಣ ಪುಟ್ಟ ವ್ಯಾಪಾಸ್ಥರು ಮತ್ತು ಮನೆ ಮನೆಗೆ ತೆರಳಿ  ಮತ ಕೇಳುವ ಮೂಲಕ  ಪ್ರಚಾರ ನಡೆಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಡಳಿತದಲ್ಲಿ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಮರೆಯದೇ ಮತದಾರರರು ತಪ್ಪದೇ ಜೆಡಿಎಸ್ ಬೆಂಬಲಿಸುವ ಮೂಲಕ ಎ.ಕೃಷ್ಣಪ್ಪನವರನ್ನು ಗೆಲ್ಲಿಸ ಬೇಕು ಎಂದು ಮನವಿ ಮಾಡಿದರು. ನಗರ ಅಧ್ಯಕ್ಷ ಕೇಬಲ್ ಸುಬ್ಬು, ಮುಖಂಡ ರಂಗಸ್ವಾಮಿ ಅನೇಕರು ಪ್ರಚಾರದಲ್ಲಿ ಸಾಥ್ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement