ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿದ್ಯಾರ್ಥಿಗಳಲ್ಲಿ ಅಧ್ಯಯನದ ಕೊರತೆ: ಎಂ.ಕೆ. ವೀರಯ್ಯ

Mainashree
Updated On : 24 Apr 2014, 12:24 pm

ತುಮಕೂರು: ಇಂದಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಕೊರತೆ ಎದ್ದು ಕಾಣುತ್ತಿದೆ. ಆದರೆ ಈ ಕೊರತೆಯನ್ನು ನೀಗಿಸಿಕೊಳ್ಳಲು ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪ್ರಾಯೋಗಿಕ ವಿಷಯಗಳಿಗೂ ಒತ್ತು ನೀಡಿದಾಗ ಕ್ರಿಯಾಶೀಲವಾಗಬಹುದು ಎಂದು ಶ್ರೀ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಕೆ.ವೀರಯ್ಯ ಅಭಿಪ್ರಾಯಪಟ್ಟರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಟೆಲಿಕಮ್ಯೂನಿಕೇಷನ್ ಎಂಜಿನಿಯರಿಂಗ್ ಮತ್ತು ಟೆಕ್ವಿಪ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಎಂಬೆಡೆಡ್ ಸಿಸ್ಟಮ್ ಮತ್ತು ಆರ್ಡಿಯುನೊ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಾಗಾರಗಳಲ್ಲಿ ವಿಷಯತಜ್ಞರು ಮಂಡಿಸುವ ವಿಷಯಗಳನ್ನು ಗ್ರಹಿಸಿಕೊಂಡು ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸಿಕೊಳ್ಳುವಂತೆ ಡಾ ವೀರಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಾಗಾರದಲ್ಲಿ ಮಾತನಾಡಿದ ಗುಲ್ಬರ್ಗಾದ ಇಂಟಿಗ್ರೇಟೆಡ್ ಐಡಿಯಾಸ್‌ನ ಸಿಇಒ ಡಾ. ರೂಪಂದಾಸ್ ಮಾತನಾಡಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೆಚ್ಚಿನ ಕಾಲವನ್ನು ಪ್ರಯೋಗಾಲಯಗಳಲ್ಲಿ ಕಳೆಯಬೇಕು. ಆ ಮೂಲಕ ತಾಂತ್ರಿಕ ಆವಿಷ್ಕಾರಗಳಿಗೆ ತಮ್ಮನ ತಾವು ತೊಡಗಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಟೆಲಿಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥ ಪ್ರೊ. ಎಚ್. ಎಸ್. ಜಯರಾಮ್, ಪ್ರಾಧ್ಯಾಪಕರಾದ ಡಾ.ಕೆ.ಬಿ.ಶಿವಕುಮಾರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement