ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮದ್ವೆ ಊಟ ಉಂಡು ಆಸ್ಪತ್ರೆ ಸೇರಿದರು!

Mainashree
Updated On : 26 Apr 2014, 12:17 pm

ಹೊಳೆನರಸೀಪುರ: ಗ್ರಾಮದಲ್ಲಿನ ಮದುವೆಯಲ್ಲಿ ಊಟ ಮಾಡಿದ 45ಕ್ಕೂ ಹೆಚ್ಚು ಜನರಿಗೆ ಇದ್ದಕ್ಕಿದ್ದಂತೆ ವಾಂತಿ, ಭೇದಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಯಡೇಗೌಡನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಗ್ರಾಮದಲ್ಲಿ ಗುರುವಾರನಾಲ್ಕು ಮದುವೆಗಳು ನಡೆದಿದ್ದವು. ಇದರಲ್ಲಿ ರಾಜೇಗೌಡ ಎಂಬವರ ಮನೆಯ ಮದುವೆಯಲ್ಲಿ ಊಟ ಮಾಡಿ ಮನೆಗೆ ತೆರಳಿದ ಗ್ರಾಮದಲ್ಲಿನ 45ಕ್ಕೂ ಹೆಚ್ಚು ಜನರಿಗೆ ಸಂಜೆ ವೇಳೆಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಕೂಡಲೇ ಎಲ್ಲರನ್ನೂ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಂಬ್ಯುಲೆನ್ಸ್ ಹಾಗೂ 108ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.  ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಟಿ.ಎಸ್. ಲಕ್ಷ್ಮೀಕಾಂತ್ ಹಾಗೂ ವೈದ್ಯ ಡಾ.ಕೆ. ಶ್ರೀನಿವಾಸಮೂರ್ತಿ ಮತ್ತು ಡಾ. ರಾಜೇಶ್  ಅಸ್ವಸ್ಥರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲು ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement