ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮಹಿಳಾ ಸಬಲೀಕರಣಕ್ಕೆ ಕಂಕಣಬದ್ಧ: ಜಿಪಂ ಸಿಇಒ

Mainashree
Updated On : 26 Apr 2014, 12:18 pm

ಕ.ಪ್ರ.ವಾರ್ತೆ  ತುಮಕೂರು  ಏ.25
ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಆದಿವಾಸಿ ಮಹಿಳೆಯರು ಗೌರವಯುತವಾಗಿ ಬದುಕಲು ಬೇಕಾದ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗೋವಿಂದರಾಜು ತಿಳಿಸಿದರು.
ಇಲ್ಲಿನ ಸದಾಶಿವನಗರದ ಈಶ್ವರೀಯ ಮಹಿಳಾ ಸಮಾಜ ತುಮಕೂರು- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಳ ಸಮುದಾಯದ ಮಹಿಳೆಯರ ಪರವಾಗಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಅವರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕುವಂತೆ ವಾತಾವರಣ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜತೆಗೆ ಮಹಿಳಾ ಸಬಲೀಕರಣಕ್ಕೆ ಬೇಕಾದ ಸಹಾಯವನ್ನು ಸರ್ಕಾರದಿಂದ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ನೀಡಬಹುದಾದ ಎಲ್ಲ ನೆರವು ನೀಡಲು ಸಿದ್ಧವಿರುವುದಾಗಿ ತಿಳಿಸಿದರು.
ಕಿರುತೆರೆ ಕಲಾವಿದ ಹನುಮಂತೇಗೌಡ ಮಾತನಾಡಿ, ಸ್ತ್ರೀಯರು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಹೊಂದುತ್ತಿದ್ದಾರೆ. ಅಲ್ಲದೆ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡುವಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಮಹಿಳೆಯರು ಸಂಘಟಿತರಾಗಿ ಇಂದು ಈ ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.
ಲೇಖಕಿ ಅನ್ನಪೂರ್ಣ ವೆಂಕಟನಂಜಪ್ಪ ಮಾತನಾಡಿ, ಹೆಣ್ಣು ಮಕ್ಕಳು ಸಮಾಜದ ದೀಪವಿದ್ದಂತೆ ಎಂದು ಪ್ರಶಂಶಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement