ಹಿನ್ನೀರಲ್ಲಿ ಮುಳುಗಿ ಯುವತಿ ಸಾವು
ಶ್ರೀರಂಗಪಟ್ಟಣ: ತಾಲೂಕಿನ ಕೆಆರ್ಎಸ್ ಜಲಾಶಯದ ಹಿನ್ನೀರಿನಲ್ಲಿ ಯುವತಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ತಾಲೂಕಿನ ಹಳೇ ಹುಂಡುವಾಡಿ ಗ್ರಾಮದ ನಿಶಾ(20) ಸಾವನ್ನಪ್ಪಿದವರು. ತನ್ನ ಸ್ನೇಹಿತರೊಂದಿಗೆ ಕೆಆರ್ಎಸ್ ಜಲಾಶಯದ ಹಿನ್ನೀರಿಗೆ ಪ್ರವಾಸಕ್ಕೆ ಬಂದಿದ್ದ ನಿಶಾ ಜಲಾಶಯದ ಹಿನ್ನೀರಿನಲ್ಲಿ ಆಟವಾಡಿ ಮಧ್ಯಾಹ್ನ ಊಟ ಮುಗಿಸಿ ಮತ್ತೆ ನೀರಿಗಿಳಿದು ಆಟವಾಡುವ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.