ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿದ್ಯಾರ್ಥಿ ವೃಂದ ವೈವಿಧ್ಯಮಯ ಕಲಾಸಿರಿವಂತಿಕೆಗೆ ವೇದಿಕೆ ಅಗತ್ಯ

Mainashree
Updated On : 1 May 2014, 12:23 pm

ಕ.ಪ್ರ.ವಾರ್ತೆ  ತುಮಕೂರು  ಏ.30
ವಿದ್ಯಾರ್ಥಿಗಳಲ್ಲಿ ವೈವಿಧ್ಯಮಯ ರೀತಿಯ ಕಲಾಸಿರಿವಂತಿಕೆಯಿರುತ್ತದೆ. ಅಂತಹ ಪ್ರತಿಭಾ ಪ್ರದರ್ಶನಕ್ಕೆ ಕಾಲೇಜಿನಲ್ಲಿ ಸೂಕ್ತ ವೇದಿಕೆಯನ್ನು ಕಲ್ಪಿಸಿದಾಗ ಅವರಲ್ಲಿರುವ ಪ್ರತಿಭೆ ಪ್ರದರ್ಶನಗೊಳ್ಳುವುದರ ಜೊತೆಗೆ ಕ್ರಿಯಾತ್ಮಕವಾಗುತ್ತಾರೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು.
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಬಯಲು ವೇದಿಕೆಯಲ್ಲಿ ಏರ್ಪಟ್ಟ ಕಲೋತ್ಸವ-2014 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಲಾ ಪ್ರತಿಭೆಗಳಿಗೆ ಕ್ಯಾಂಪಸ್‌ನಲ್ಲಿ ವೇದಿಕೆ ಸಿಕ್ಕಾಗ ಅವರ ಮನಸ್ಸು ವಿಕಸಗೊಳ್ಳುತ್ತದೆ ಎಂದರು.
ಕಲೋತ್ಸವದಂತಹ ಕಾರ್ಯಕ್ರಮದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಮೈಗೂಡಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ಪಾಠ-ಪ್ರವಚನದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅವರ ಮನಸ್ಸಿಗೆ ಮುದ ನೀಡುತ್ತದೆ ಎಂದು ಪರಮೇಶ್ವರ್ ಹೇಳಿದರು. ನಟ ನೀನಾಸಂ ಸತೀಶ್, ಸಂಗೀತ ನಿರ್ದೇಶಕ ಅನೂಪ್ ಸಲೀಂ ಮತ್ತು ಸಿನಿಮಾ ನಿರ್ದೇಶಕ ಅರಸು ಅಂತಾರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರೇಕ್ಷಕರನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಮಧುಗಿರಿ ಶಾಸಕ ರಾಜಣ್ಣ, ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ
ಪ್ರೊ.ಸಿ ಎನ್. ನರಸಿಂಹಮೂರ್ತಿ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಕೆ.ಎ. ಕೃಷ್ಣಮೂರ್ತಿ,  ಉಪಪ್ರಾಂಶುಪಾಲ ಡಾ.ಎಂ.ಕೆ.ವೀರಯ್ಯ, ಡೀನ್ ಎಂ.ಝಡ್. ಕುರಿಯನ್, ಕಲೋತ್ಸವದ ಸಂಚಾಲಕರಾದ ಡಾ.ರಮೇಶ್, ಡಾ.ರಾಜೇಶ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರಿಗೆ ಕಾಲೇಜು ವಿದ್ಯಾರ್ಥಿಗಳ ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮುದ ನೀಡಿದವು. ಸಂಸ್ಥೆಯ ಮಹಿಳಾ ಅಧ್ಯಾಪಕರು ನಡೆಸಿಕೊಟ್ಟ ಪ್ಯಾಷನ್ ಶೋ ಗಮನ ಸೆಳೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement