ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿನಿಷೇಧಾಜ್ಞೆ ಜಾರಿ: ಸತ್ಯಮೂರ್ತಿ
ತುಮಕೂರು: ಸಾಮಾನ್ಯ ಪ್ರವೇಶ ಪರೀಕ್ಷೆಯು ಮೇ 1 ಮತ್ತು 2 ರಂದು ತುಮಕೂರು ನಗರದ 9 ಕೇಂದ್ರಗಳಲ್ಲಿ ಹಾಗೂ ತಿಪಟೂರು ನಗರದ 2 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಬಳಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ, ನಕಲು ಪ್ರೇರಣಾ ಚಟುವಟಿಕೆಗಳು ನಡೆಯದಂತೆ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಸಲುವಾಗಿ ಪರೀಕ್ಷೆ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳು: ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಬಿ.ಹೆಚ್.ರಸ್ತೆ, ತುಮಕೂರು, ವಿದ್ಯಾವಾಹಿನಿ ಪದವಿಪೂರ್ವ ಕಾಲೇಜು, ಎಸ್.ಐ.ಟಿ. ಬಡಾವಣೆ, ತುಮಕೂರು, ಸರ್ವೋದಯ ಪದವಿಪೂರ್ವ ಕಾಲೇಜು, ಹೊರಪೇಟೆ, ತುಮಕೂರು, ವಾಸವಿ ಪದವಿಪೂರ್ವ ಕಾಲೇಜು, ಎಸ್.ಐ.ಟಿ. ಬಡಾವಣೆ, ತುಮಕೂರು, ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜು, ಅಶೋಕ ರಸ್ತೆ, ತುಮಕೂರು, ಸಿದ್ಧಗಂಗಾ ಬಾಲಕರ ಪದವಿಪೂರ್ವ ಕಾಲೇಜು, ಬಿ.ಹೆಚ್.ರಸ್ತೆ, ತುಮಕೂರು, ಸಿದ್ಧಗಂಗಾ ಬಾಲಕಿಯರ ಪದವಿಪೂರ್ವ ಕಾಲೇಜು, ಸಿದ್ಧಗಂಗಾ ಬಾಲಕಿಯರ ಪದವಿಪೂರ್ವ ಕಾಲೇಜು, ಬಿ.ಎಚ್. ರಸ್ತೆ, ತುಮಕೂರು, ಬಿಷಪ್ ಸಾರ್ಜೆಂಟ್ ಪದವಿಪೂರ್ವ ಕಾಲೇಜು, ಸಿ.ಎಸ್.ಐ. ಬಡಾವಣೆ, ತುಮಕೂರು, ಶ್ರೀ ಸಿದ್ಧಗಂಗಾ ಪದವಿಪೂರ್ವ ಕಾಲೇಜು, ಬಿ.ಎಚ್.ರಸ್ತೆ, ತುಮಕೂರು, ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ತಿಪಟೂರು, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ತಿಪಟೂರು.
ನಿಷೇಧಾಜ್ಞೆಯು ಮೇ 1 ಮತ್ತು 2 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್, ಬೆರಳಚ್ಚು ಕೇಂದ್ರಗಳನ್ನು ಮುಚ್ಚಲು ಹಾಗೂ ಸ್ಟೆನ್ಸಿಲ್ ಯಂತ್ರಗಳ ಬಳಕೆಯನ್ನು ನಿಷೇಧಿಸಲು ಕ್ರಮ ಜರುಗಿಸುವುದು, ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದ ಒಳಗಡೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವ ಅನಧಿಕೃತ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತುಮಕೂರು ಜಿಲ್ಲೆಯಲ್ಲಿನ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.