ತಿಪಟೂರು: ತಾಲೂಕು ಹಿರಿಯ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟ ಪಟ್ಟಣದ ಕಲ್ಪತರು ಕ್ರೀಡಾಂಗಣದಲ್ಲಿ ಆ.3ರಂದು ಭಾನುವಾರ ಬೆಳಗ್ಗೆ 9.30ಕ್ಕೆ ಏರ್ಪಡಿಸಲಾಗಿದೆ. ಧ್ವಜಾರೋಹಣವನ್ನು ಶಾಸಕ ಕೆ. ಷಡಕ್ಷರಿ ನರೆವೇರಿಸಲಿದ್ದು, ಅಧ್ಯಕ್ಷತೆ ತಾಪಂ ಅಧ್ಯಕ್ಷೆ ನೇತ್ರಾವತಿ ಭಾಸ್ಕರ್ ವಹಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಈಶ್ವರಯ್ಯ ಉದ್ಘಾಟಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಗೀತಾದಿಲೀಪ್ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ.