ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅಸಮರ್ಪಕ ವಿದ್ಯುತ್ ವಿತರಣೆ ವಿರೋಧಿಸಿ ಬಿಜೆಪಿ ಬೆಸ್ಕಾಂ ಕಚೇರಿಗೆ ಮುತ್ತಿಗೆ

Rashmi Kasaragodu
Updated On : 5 Aug 2014, 12:23 pm

ತುಮಕೂರು: ಅಸಮರ್ಪಕ ವಿದ್ಯುತ್ ಸರಬರಾಜು ನೀತಿ ಖಂಡಿಸಿ, ಅನಿಯಮಿತ ಲೋಡ್‌ಶೆಡ್ಡಿಂಗ್ ವಿರೋಧಿಸಿ, ಸರ್ಕಾರದ ರೈತ ವಿರೋಧಿ ನೀತಿಯನ್ನು ಧಿಕ್ಕರಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೋಮವಾರ ಬೆಸ್ಕಾಂ ಕಚೇರಿಗೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಕೋತಿತೋಪು ಮುಖ್ಯರಸ್ತೆಯ ಬೆಸ್ಕಾಂ ವಲಯ ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರದ ವಿರುದ್ಧ ರೈತ ಮೋರ್ಚಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಸುರೇಶ್‌ಗೌಡ, ಅಲ್ಲಲ್ಲಿ ಕೆಟ್ಟು ಹೋಗುವಂತಹ ವಿದ್ಯುತ್ ಪರಿಕರಗಳನ್ನು ಕೂಡಲೇ ಸರಿಪಡಿಸಿ ಅಗತ್ಯ ಕಡೆಗಳಲ್ಲಿ ಹೊಸ ಪರಿಕರ ಅಳವಡಿಸಬೇಕು ಎಂದು ಸರ್ಕಾರವನ್ನು ಎಚ್ಚರಿಸಿದರು. ಮಾಜಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ರೈತರ ಹಿತಚಿಂತಕರು ಎಂದು ಹೇಳಿಕೊಳ್ಳುತ್ತಿರುವ ಸರ್ಕಾರ ರೈತರಿಗೆ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ಇದರಿಂದಾಗಿ ರೈತರಿಗೆ ಕುಡಿಯುವ ನೀರು, ಪಂಪ್‌ಸೆಟ್‌ಗಳ ಮೂಲಕ ಕೃಷಿ ಭೂಮಿಗೆ ನೀರು ಸೇರಿದಂತೆ ಹಲವು ಕೆಲಸಗಳಿಗೆ ಸಾಕಷ್ಟು ತೊಂದರೆಯಾಗಿದೆ. ಜಿಲ್ಲೆಯ ಅಧಿಕಾರಿಗಳು ವರ್ಗಾವಣೆ ಭೀತಿಯಿಂದಾಗಿ ಯಾರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಎಲ್ಲ ಕಡೆ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಕೆಲಸಕ್ಕೆ ಬಾರದ ಸಚಿವರೇ ತುಂಬಿರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ. ಹಾಗಾಗಿ ಸಮರ್ಥ ಆಡಳಿತ ನಡೆಸಲು ಆಗದಿದ್ದರೆ ಸಚಿವರು ಹಾಗೂ ಸಿಎಂ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement