ಇಂದು ವಿದ್ಯಾರ್ಥಿಗಳಿಗೆ ಮಾಹಿತಿ ಶಿಬಿರ
ತುಮಕೂರು: ಕಟ್ಟಡ ಕಾರ್ಮಿಕರ ಮಕ್ಕಳಿಗೆ ದೊರೆಯುವ ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳನ್ನು ಪಡೆಯುವುದು ಹೇಗೆ ಎಂಬ ವಿಷಯದ ಬಗ್ಗೆ ಇಲ್ಲಿನ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಫೆ. 2 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ವತಿಯಿಂದ ಈ ಶಿಬಿರ ಏರ್ಪಡಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಹಾಜರಾಗಿ ಸದುಪಯೋ ಪಡೆದುಕೊಳ್ಳಬೇಕೆಂದು ಸಂಘ ಮನವಿ ಮಾಡಿದೆ. ಈ ಶಿಬಿರದಲ್ಲಿ ಸಿದ್ದಾರ್ಥ ಮೆಡಿಕಲ್ ಆಸ್ಪತ್ರೆ ಮನೋವೈದ್ಯಕೀಯ ಮುಖ್ಯಸ್ಥ ಡಾ. ಸತ್ಯನಾರಾಯಣ, ಡಾ. ಹೇಮಂತಕುಮಾರ್, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಸಾತಿ ಸುಂದರೇಶ್ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ. ಬಸವಯ್ಯ ಆಗಮಿಸಲಿದ್ದಾರೆ ಎಂದರು.