ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ
ಚಿಕ್ಕನಾಯಕನಹಳ್ಳಿ: 2013-14ನೇ ಸಾಲಿಗೆ ಕೇಂದ್ರ ಪುರಸ್ಕೃತ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಸಂಬಂಧ ಹೇಳಿಕೆ ನೀಡಿರುವ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಿಸಿಎಂ ಇಲಾಖೆಯ ಕೇಂದ್ರ ಪುರಸ್ಕೃತ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ 2013-14ನೇ ಸಾಲಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದ್ದರಿಂದ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರು ಈ ಕಚೇರಿಯಿಂದ ಅರ್ಜಿಗಳನ್ನು ಪಡೆದು ಫೆ.15ನೇ ತಾರೀಖಿನೊಳಗೆ ಸಂಜೆ 5.30ಕ್ಕೆ ಸಲ್ಲಿಸತಕ್ಕದ್ದು. ಈಗಾಗಲೆ ರಾಜ್ಯ ಸರ್ಕಾರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮತ್ತೆ ಕೇಂದ್ರಪುರಸ್ಕೃತ ವಿದ್ಯಾರ್ಥಿ ವೇತನ್ಕಕೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಆದ್ದರಿಂದ ಈಗಾಗಲೇ ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಾರದು ಎಂದು ತಿಳಿಸಿದ್ದಾರೆ.