ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅಕ್ರಮ ಮದ್ಯ ಮಾರಾಟ ವಿರುದ್ಧ ವಿನೂತನ ಪ್ರತಿಭಟನೆ

Rashmi Kasaragodu
Updated On : 4 Feb 2014, 1:34 am

ಗುಬ್ಬಿ : ತಾಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಿರಾತಂಕವಾಗಿ ನಡೆಯುತ್ತಿದ್ದು  ಅದನ್ನು ತಡೆಗಟ್ಟುವಂತೆ ಹಲವಾರು ಬಾರಿ ಅಬಕಾರಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪಟ್ಟಣದ ಅಬಕಾರಿ ಕಚೇರಿ ಮುಂಭಾಗದಲ್ಲಿ ಅಣುಕು ಮದ್ಯ ಮಾರಾಟ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ದಲಿತ ಸರ್ವೋದಯ ಸಮಿತಿ, ತಾಲೂಕು ಬಿಜೆಪಿ ಘಟಕ, ಜಯ ಕರ್ನಾಟಕ ಸಂಘಟನೆ, ಸ್ತ್ರೀಶಕ್ತಿ ಸಂಘಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಐಡಿಎಫ್ ಸಂಸ್ಥೆ, ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ  ಅಬಕಾರಿ ಕಚೇರಿ ಮುಂದೆಯೇ ಮದ್ಯ ಮಾರಾಟ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದಾಗಿ  ಕಾರ್ಯದರ್ಶಿ ಮೆಳೆಕಲ್ಲಹಳ್ಳಿ ಯೋಗೀಶ್ ತಿಳಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಬಕಾರಿ ನಿರೀಕ್ಷಕ ಕೃಷ್ಣ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಇನ್ನು ಮುಂದೆ ತಾಲೂಕಿನಾಧ್ಯಂತ ಯಾವುದೇ ರೀತಿಯ ಅಕ್ರಮ ಮದ್ಯ ಮಾರಾಟವಾಗದಂತೆ ಅಗತ್ಯ ಕ್ರಮಕೈಗೊಳ್ಳುವುದಾಗಿ ಲಿಖಿತ ಉತ್ತರ ನೀಡಿದ ನಂತರ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಯಿತು.
ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ನಿಟ್ಟೂರು ರಂಗಸ್ವಾಮಿ, ಜಿ.ಸಿ.ದುರ್ಗೇಶ್, ಜಿ.ಸಿ.ನಾಗರಾಜು, ರತ್ನಕುಮಾರ್, ಜಿ.ಎಚ್.ಜಗನ್ನಾಥ್, ನಿಟ್ಟೂರು ನರಸಿಂಹಯ್ಯ, ದೇವರಾಜು, ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳಾದ ಮಂಜುನಾಥ್, ದಶರಥ್, ಪ್ರದೀಪ್ ಗೌಡ, ಗಿರಿಯಪ್ಪ, ಮಂಜುಳ, ಬಿಜೆಪಿಯ ಬಿ.ಎಸ್.ಪ್ರಸಾದ್, ಲೋಕೇಶ್ ಸೇರಿದಂತೆ ಸ್ತ್ರೀ ಶಕ್ತಿ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement