ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್: ಹುಲಿನಾಯ್ಕರ್

Vishwanath S
Updated On : 6 Feb 2014, 12:54 pm

ಕ.ಪ್ರ.ವಾರ್ತೆ ,  ತಿಪಟೂರು ,  ಫೆ.5
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹಲವಾರು ಹಗರಣಗಳಲ್ಲಿ ಮುಳುಗಿದ್ದು, ಜನರ ವಿಶ್ವಾಸ ಕಳೆಕೊಂಡಿದೆ. ದೇವೇಗೌಡರ ನೇತೃತ್ವದಲ್ಲಿ ತೃತೀಯರಂಗ ಅಸ್ತಿತ್ವಕ್ಕೆ ಬರುವುದಲ್ಲದೆ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸುವುದಾಗಿ ವಿಧಾನಪರಿಷತ್ ಸದಸ್ಯ ಎಂ.ಆರ್. ಹುಲಿನಾಯ್ಕರ್ ಅಭಿಪ್ರಾಯಪಟ್ಟರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೋದಿ ದೇಶವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ.  ಆದ್ದರಿಂದ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡರು ತಮ್ಮ ಅಪಾರ ರಾಜಕೀಯ ಅನುಭವದಿಂದ ದೇಶದ ಅಭಿವೃದ್ಧಿಯ ಕನಸಿನೊಂದಿಗೆ ತೃತೀಯರಂಗ ರಚನೆಗೆ ಮುಂದಾಗಿದ್ದು, ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಪಾತ್ರವಹಿಸಲ್ಲಿದ್ದಾರೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದಲ್ಲಿ ಹೆಚ್ಚಿನ ಜಾತ್ಯತೀತ ಜನತಾದಳದ ಅಭ್ಯರ್ಥಿಗಳು ಸ್ಥಾನ ಗೆಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ದುಡಿಯುತ್ತಿದ್ದು, ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಮಾವೇಶವೆ ಸಾಕ್ಷಿಯಾಗಿದೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಫೆ.9ರಂದು ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಯುತ್ತಿದ್ದು, ದೇವೇಗೌಡರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದ್ದರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement