ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸರ್ಕಾರ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದೆ: ಕೆ.ಷಡಕ್ಷರಿ

Vishwanath S
Updated On : 14 Feb 2014, 11:33 am

ತಿಪಟೂರು: ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಜಾರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಕೆ.ಷಡಕ್ಷರಿ ಕರೆ ನೀಡಿದರು.
 ಪಟ್ಟಣದ ಕಲ್ಪತರು ಸಭಾಂಗಣದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ  ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕಿನ 53 ಪ್ರೌಢಶಾಲೆಗಳ ಆಯ್ದ 500 ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಕ್ಕಳೇ ಪರೀಕ್ಷೆಗೆ ಸಿದ್ದರಾಗಿ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಗುರುತರ ಜವಾಬ್ದಾರಿಇದೆ. ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.
 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ವೆಂಕಟೇಶ್ ಹಾಗೂ ಅಧ್ಯಕ್ಷತೆ ವಹಿಸಿದ್ದ ತಾ.ಪಂ.ಅಧ್ಯಕ್ಷೆ ಶಿವಗಂಗಮ್ಮ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ಪ್ರಭುಸ್ವಾಮಿ ಉಪಸ್ಥಿತರಿದ್ದರು. ಸಿಡಿಪಿಓ ಪಿ.ಓಂಕಾರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಜಯಕುಮಾರ್, ಎಸ್.ಆರ್.ಮಹೇಶ್, ಪ್ರಕಾಶಪ್ಪ, ಚೆಲುವರಾಜು, ಎ.ಆರ್. ಮಂಜುನಾಥ್ ಸಂಪನ್ಮೂಲ ವ್ಯಕ್ತಿಗಳಾಗಿ ಹಾಜರಾಗಿ ಉಪನ್ಯಾಸ ನೀಡಿದರು.
 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಸದುಪಯೋಗಪಡಿಸಿಕೊಂಡರು. ತಾಲೂಕಿನಲ್ಲಿ ಎಲ್ಲಾ ಪ್ರೌಢಶಾಲೆಯ ಎಲ್ಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಜರಿದ್ದರು.
 ಶಾಲಾ ಮಕ್ಕಳು ಪ್ರಾರ್ಥಿಸಿದರು. ಎಸಿಡಿಪಿಓ ಸುಂದರಮ್ಮ ಸ್ವಾಗತಿಸಿ,ದೀಪ ನಿರೂಪಿಸಿ,ಗೋಪಾಲಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement