ರಾಹುಲ್ ಸಮಾವೇಶಕ್ಕೆ ತುಮಕೂರು ಸಜ್ಜು
ತುಮಕೂರು: ಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಾಲ್ಗೊಳ್ಳಲಿರುವ ಮಹಿಳಾ ಸಮಾವೇಶಕ್ಕೆ ತುಮಕೂರು ಸಜ್ಜಾಗಿದೆ. ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸಮಾವೇಶಕ್ಕಾಗಿ ಬೃಹತ್ ಪೆಂಡಾಲ್ ನಿರ್ಮಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸುವ ರಾಹುಲ್ ಗಾಂಧಿ ಮಧ್ಯಾಹ್ನ 2 ಗಂಟೆಯವರೆಗೆ ತುಮಕೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಸಾವಿರಾರು ಮಂದಿ ತುಮಕೂರಿಗೆ ಆಗಮಿಸುತ್ತಿದ್ದಾರೆ. ಎಲ್ಲೆಲ್ಲೂ ಫ್ಲೆಕ್ಸ್ ಭರಾಟೆ ಆರಂಭವಾಗಿದೆ.