ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಶಾಲೆ ಪಾವಿತ್ರ್ಯ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲೆ

Srinivasa Murthy VN
Updated On : 15 Feb 2014, 11:41 am

ಮಧುಗಿರಿ: ಇಂದಿನ ಯುವ ಜನಾಂಗ ಸ್ವಸ್ಥ ಸಮಾಜ ಕಟ್ಟುವ ನಿಟ್ಟಿನಲ್ಲಿ ಜ್ಞಾನ ಸಂಪಾದಿಸುವ ಶಾಲಾ ಕಾಲೇಜುಗಳ
ಪಾವಿತ್ರ್ಯತೆ ಕಾಪಾಡುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ. ಸಿದ್ದಗಂಗಪ್ಪ ಕರೆ ನೀಡಿದರು.
ತಾಲೂಕಿನ ಪುರವರ ಗ್ರಾಮದ  ಜ್ಞಾನ ಸಿಂಧು ಶಾಲೆಯಲ್ಲಿ ಏರ್ಪಟಾಗಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗತೀಕರಣದ ಈ ಹೊತ್ತಲ್ಲಿ ಕಂಪ್ಯೂಟರ್ ಕಲಿಕೆ ಅತ್ಯಗತ್ಯ  ಶಿಕ್ಷಕರು ಬುದ್ಧ, ಬಸವ, ಅಂಬೇಡ್ಕರ್ ಅವರಂತಹ ಆದರ್ಶ, ತತ್ವಗಳನ್ನು ಮಕ್ಕಳಲ್ಲಿ ಬಿತ್ತುವ ಮೂಲಕ ಈ ದೇಶದ ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಮಹಾಲಿಂಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ,ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡುವ ಬದಲಾಗಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ಸೂಸಲು ಶಿಕ್ಷಕರು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಕಾರ್ಯದರ್ಶಿ ಹನುಮಂತರಾಯಪ್ಪ, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಕೆ. ರಂಗನಾಥ್, ಲಾಲ್ ಬಹುದ್ದೂರ್ ಕಾಲೇಜು ಪ್ರಾಂಶುಪಾಲ ಹನುಮಂತರಾಯಪ್ಪ ಉಪಸ್ಥಿತರಿದ್ದರು. ವಿನುತ ಸ್ವಾಗತಿಸಿ ಅರುಣ ವಂದಿಸಿದರು. ಶಬನಾ ಬಾನು ಶಾಲಾ ವರದಿ ವಾಚಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement