ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಅಗತ್ಯ

Rashmi Kasaragodu
Updated On : 20 Feb 2014, 2:24 am

ಕ.ಪ್ರ. ವಾರ್ತೆ    ಗುಬ್ಬಿ    ಫೆ.19
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕೆಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಡಿ. ಸುರೇಶ್ಗೌಡ ತಿಳಿಸಿದರು.
ಪಟ್ಟಣದ ಸ್ಟೆಲ್ಲಾ ಮೇರಿಸ್ ಆಂಗ್ಲಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದ ಅವರು ಪಠ್ಯಕ್ರಮಗಳ ಜತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸುವುದು ಪಾಲಕರ ಕರ್ತವ್ಯ ಎಂದ ಅವರು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಖಾಸಗಿ ವಿದ್ಯಾಸಂಸ್ಥೆಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಬಸವರಾಜು ಮಾತನಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮಕ್ಕಳಲ್ಲಿ ವಿದ್ಯಾಭ್ಯಾಸ ಆಸಕ್ತಿ ಮೂಡಿಸಬೇಕಿ ಎಂದರು.
ಪಟ್ಟಣ ಪಂಚಾಯ್ತಿ ಸದಸ್ಯ ಕೃಷ್ಣಮೂರ್ತಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿಎಂ.ಎಸ್.ಶಂಕರ್, ಸ್ಟೆಲ್ಲಾ ಮೇರಿಸ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಮುಸ್ತಾಕ್ ಅಹಮದ್, ಪ್ರೊ.ಅಶ್ವಕ್ ಅಹಮದ್, ಮುಖ್ಯ ಶಿಕ್ಷಕ ಬಸವರಾಜು ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement