ಹಣ ಬಿಡುಗಡೆಗಾಗಿ ಅಭಾವಿಪ ಪ್ರತಿಭಟನೆ
ಕ.ಪ್ರ. ವಾರ್ತೆ ತುಮಕೂರು ಫೆ.19
ಹಿಂದುಳಿದ ವರ್ಗಕ್ಕೆ ಸೇರಿದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತಲುಪಬೇಕಾದ ಶುಲ್ಕವಿನಾಯಿತಿ ಮೊತ್ತ ಮೂರು ವರ್ಷಗಳಿಂದ ಬಾರದೆ ಇರುವುದನ್ನು ಖಂಡಿಸಿ ಅಭಾವಿಪ ತುಮಕೂರು ವಿವಿಧ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸಹಕಾರ್ಯದರ್ಶಿ ಅಮರೇಶ್ ಮಾತನಾಡಿ ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದಿದ್ದು ಕಷ್ಟಕರ ಪರಿಸ್ಥಿತಿಯಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ.
ಈ ಕೂಡಲೆ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಎಚ್ಚತ್ತುಕೊಂಡು ಶುಲ್ಕ ವಿನಾಯಿತಿ ಹಣವನ್ನು ಬಿಡುಗಡೆ ಮಾಡಬೇಕಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಿಗೆ ಮನವಿ ಪತ್ರವನ್ನು ಸಲ್ಲಿಸಿದರು.