ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಶತಾಯುಷಿ ಸಿದ್ಧಗಂಗಾ ಶ್ರೀಗಳಿಗೆ ಗುರುವಂದನೆ

Mainashree
Updated On : 20 Feb 2014, 10:44 am

ತುಮಕೂರು: ಶತಾಯುಷಿ ಸಿದ್ಧಗಂಗಾ ಶ್ರೀಗಳಿಗೆ ಗುರುವಾರ 106ನೇ ಜನ್ಮದಿನೋತ್ಸವದ ಪ್ರಯುಕ್ತ ಭಕ್ತವೃಂದದಿಂದ ಗುರುವಂದನೆ ನೆರವೇರಿಸಲಾಯಿತು. ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ನಡೆದ ಈ ಕಾರ್ಯಕ್ರಮಕ್ಕೇ ಸಾವಿರಾರು ಭಕ್ತರು ಸಾಕ್ಷಿಯಾದರು. ರಾಜ್ಯದ ಮೂಲೆ ಮೂಲೆಗಳಿಂದ ಶ್ರೀಗಳ ಜನ್ಮದಿನೋತ್ಸವ ಕಾರ್ಯಕ್ರಮಕ್ಕೆ ಜನಸ್ತೋಮ ಹರಿದು ಬಂದಿತ್ತು. ಬಂದ ಭಕ್ತಾದಿಗಳಿಗೆ ದಾಸೋಹ ಏರ್ಪಡಿಸಲಾಗಿತ್ತು. ಇದಕ್ಕಾಗಿ ಮಠದ ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರು ಊಟೋಪಚಾರದ ಉಸ್ತುವಾರಿ ವಹಿಸಿಕೊಂಡಿದ್ದರು. ಬುಧವಾರ ರಾತ್ರಿಯಿಂದಲೇ ರಾಜ್ಯದ ಬೇರೆ ಬೇರೆ ಭಾಗಗಳಿಂದ ಜನರು ಶ್ರೀ ಮಠದತ್ತ ಧಾವಿಸಿದ್ದರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ ಶೆಟ್ಟರ್, ಮಾಜಿ ಸಚಿವ ಸೋಮಣ್ಣ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ಸಂಸದ ಜಿ.ಎಸ್. ಬಸವರಾಜು ಸೇರಿದಂತೆ ನೂರಾರು ಜನಪ್ರತಿನಿಧಿಗಳು ಸಿದ್ಧಗಂಗೆಗೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದರು.
ಧರ್ಮಗುರುಗಳ ಮಾರ್ಗದರ್ಶನ ಬೇಕಿದೆ: ಸಿದ್ಧಗಂಗಾ ಮಠದಲ್ಲಿ ಆಯೋಜಿಸಿದ್ದ ಸಿದ್ಧಗಂಗಾ ಶ್ರೀಗಳ ಜನ್ಮಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಹಂಸರಾಜ್, ದೇಶ ಒತ್ತಡ, ಸಂಕಷ್ಟ ಸನ್ನಿವೇಶ ಎದುರಿಸುತ್ತಿದ್ದು, ಧರ್ಮಗುರುಗಳ ಮಾರ್ಗದರ್ಶನ ಬೇಕಿದೆ. ಇಂಥ ಸಂದರ್ಭದಲ್ಲಿ ನಂಬಿಕೆ ಇಡಬಹುದಾದ ವರ್ಗ ಧರ್ಮಗುರುಗಳು, ಮಠಾಧೀಶರದ್ದು. ಧರ್ಮಗುರುಗಳು, ಸಾಧು-ಸಂತರ ಮಾರ್ಗದರ್ಶನ ದೇಶಕ್ಕೆ ಅಗತ್ಯ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement