ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅತಿಥಿ ಉಪನ್ಯಾಸಕರ ಪ್ರತಿಭಟನೆ

Rashmi Kasaragodu
Updated On : 22 Feb 2014, 1:59 am

ಪಾವಗಡ: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅನೇಕ ಮಂದಿ ಅತಿಥಿ ಉಪನ್ಯಾಸಕರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ತರಗತಿಗಳಿಗೆ ಬಹಿಷ್ಕಾರ ಹಾಕಿದ ಪ್ರತಿಭಟನಕಾರರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಮೆರವಣಿಗೆ ಹೊರಟು ತಾ. ಕಚೇರಿ ಬಳಿ ಉಗ್ರ ಪ್ರತಿಭಟನೆ ನಡಸಿದರು.
ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಅದೇಶದನ್ವಯ ಇಂದಿನಿಂದ ತರಗತಿಗಳಿಗೆ ಬಹಿಷ್ಕಾರ ಹಾಕುವ ಮೂಲಕ ಅತಿಥಿ ಉಪನ್ಯಾಸಕರ ಬೇಡಿಕೆಗಳು ಈಡೇರುವವರೆವಿಗೂ ಅನಿರ್ದಿಷ್ಟ ಕಾಲ ಮುಷ್ಕರ ಹಮ್ಮಿಕೊಳ್ಳವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. ನರಸಿಂಹರಾಜು ಅತಿಥಿ ಉಪನ್ಯಾಸಕರ ಸೇವೆ ಕಾಯಂ ಗೊಳಿಸಿಬೇಕು. ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರಸಕ್ತ ಶೈಕ್ಷಣಿಕ ವರ್ಷದ ಸಾಲಿನಲ್ಲಿ ಸೇವೆಯಲ್ಲಿರುವ ಅತಿಥಿ ಉಪಾನ್ಯಾಸಕರನ್ನೇ ಮುಂದುವರಿಸಬೇಕು. 2500ರು.ಗಳಿಗೆ ಗೌರವ ಧನ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement