ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಸದುಪಯೋಗ ಪಡೆಯಲಿ: ಶಾಸಕ
ಗುಬ್ಬಿ: ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿ ಪಥದತ್ತ ಸಾಗುವಂತೆ ಶಾಸಕ ಎಸ್.ಆರ್. ಶ್ರೀನಿವಾಸ್ ಕರೆ ನೀಡಿದರು.
ತಾಲೂಕಿನ ಎಸ್.ಕೊಡಗೀಹಳ್ಳಿ ಗ್ರಾಮದ ಶ್ರೀನಿವಾಸ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಅಡುಗೆ ಕೋಣೆ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಶಾಲೆಗಳ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಹಲವಾರು ಮಹತ್ವದ ಯೋಜನೆಗಳನ್ನು ಸರ್ಕಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಅಡುಗೆ ಕೊಠಡಿ, ಶಾಲಾ ಕೊಠಡಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು, ವಿ.ಎಸ್.ಎಸ್.ಎನ್ ಅಧ್ಯಕ್ಷ ಗೋವಿಂದಪ್ಪ, ಮುಖಂಡ ವೀರೇಶ್, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಗಂಗಯ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್.ಶಂಕರ್, ತಾಲೂಕು ಅಧ್ಯಕ್ಷ ಎಚ್.ಕೆ. ಕರಿಯಪ್ಪ, ಕಾರ್ಯದರ್ಶಿ ಶಾಂತರಾಜು, ಮುಖ್ಯ ಶಿಕ್ಷಕ ಎಚ್.ಎನ್. ದೇವರಾಜು, ಪಿ.ಡಿ.ಓ ನಾರಾಯಣ್ ಮುಂತಾದವರು ಭಾಗವಹಿಸಿದ್ದರು.