ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನೀರಿಗಾಗಿ ಕಡಬಾ ಗ್ರಾಪಂ ಕಚೇರಿ ಎದುರು ಪ್ರತಿಭಟನೆ

Rashmi Kasaragodu
Updated On : 1 Mar 2014, 12:53 pm

ಗುಬ್ಬಿ: ಕಳೆದ ಮೂರು ತಿಂಗಳಿಂದಲೂ ಕುಡಿಯಲು ನೀರಿನ ಸಮಸ್ಯೆ ತೀವ್ರಗೊಂಡಿದ್ದರೂ  ಸಂಬಂಧಿಸಿದ ಅಧಿಕಾರಿಗಳು ಯಾವುದೇ ಅಗತ್ಯ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಕಡಬಾ ಹೋಬಳಿ ಬ್ಯಾಲಹಳ್ಳಿ ಗ್ರಾಮದ ಗ್ರಾಮಸ್ಥರು ಕಡಬಾ ಗ್ರಾಮ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಡಬ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಬ್ಯಾಲಹಳ್ಳಿಗ್ರಾಮದಲ್ಲಿ ಸುಮಾರು 100 ಕ್ಕೂ ಅಧಿಕ ಕುಟುಂಬಗಳು ವಾಸವಾಗಿದ್ದು ಸರಿ ಸುಮಾರು ಮೂರು ತಿಂಗಳಿಂದ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಕೆ ಮಾಡದೆ  ಸಮಸ್ಯೆ ಉಂಟಾಗುವಂತೆ ಮಾಡಿದ್ದಾರೆಂದು ಆರೋಪಿಸಿದ ಪ್ರತಿಭಟನಾಕಾರರು ಸರಿಯಾಗಿ ಗ್ರಾಮದಲ್ಲಿ ಸರಕಾರಿ ಶಾಲೆ ಇದ್ದು ಬಿಸಿ ಊಟ ಸಿದ್ಧತೆ ಮಾಡಲು ಕೂಡ ನೀರಿನ ಸಮಸ್ಯೆ ಇದ್ದು ಇದರ ಬಗ್ಗೆ ಬಹಳಷ್ಟು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ತ್ವರಿತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಮತ್ತಷ್ಟು ಉಗ್ರ ಸ್ವರೂಪದ ಹೋರಾಟ ಮಾಡುವುದಾಗಿ ಎಸ್‌ಡಿಎಂಸಿ ಅಧ್ಯಕ್ಷ ಬಿ.ಟಿ. ರಂಗಪ್ಪ  ಎಚ್ಚರಿಕೆ ನೀಡಿದರು.
ಗ್ರಾಮಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಹಲವಾರು ಭಾರಿ ಮನವಿ ಮಾಡಿದರೂ ಸಮಸ್ಯೆ ಉಲ್ಬಣಗೊಂಡಿರುವುದರಿಂದ ಜನ ಜಾನುವಾರುಗಳ ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ಕೂಡಲೇ ತ್ವರಿತವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ  ಯತೀಶ್ ಒತ್ತಾಯಿಸಿದರು.   ಗ್ರಾಮಸ್ಥರಾದ ಶಾರದಮ್ಮ, ಪಾರ್ವತಮ್ಮ, ಜಯಮ್ಮ, ಕಮಲಮ್ಮ, ಸಾವಿತ್ರಮ್ಮ, ಚನ್ನಬಸವಯ್ಯ, ರೇಣುಕಮ್ಮ ರಂಗೇಗೌಡ ಸೇರಿದಂತೆ ಬ್ಯಾಲಹಳ್ಳಿಯ ತುಳಸಿ ರಂಗ ಸ್ವಸಹಾಯ ಸಂಘ, ತುಳಸಿ ದೇವ ಸ್ವಸಹಾಯ ಸಂಘ, ಭುವನೇಶ್ವರಿ ಸ್ವಸಹಾಯ ಸಂಘದ ಸದಸ್ಯರು  ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement