ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪದ್ಮಶಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Rashmi Kasaragodu
Updated On : 1 Mar 2014, 12:55 pm

ತುಮಕೂರು: ನೇಕಾರ ಪದ್ಮಶಾಲಿ ಸಮಾಜದ ವಿದ್ಯಾರ್ಥಿಗಳು ಉನ್ನಣ ಶಿಕ್ಷಣ ಪಡೆಯುವ ಮೂಲಕ ಸಮಾಜಕ್ಕೆ ದಾರಿದೀಪವಾಗಬೇಕು ಎಂದು ಉಪನ್ಯಾಸಕ ಡಾ.ರಘುರಾಂ ಕರೆ ನೀಡಿದರು.
ಜಿಲ್ಲಾ ಪದ್ಮಶಾಲಿ ಸಂಘದ ಆಶ್ರಯದಲ್ಲಿ ಪಟ್ಟಣದ ಶಿವಮೂಕಾಂಬಿಕಾನಗರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಮಾರ್ಕಂಡೇಯ ಸ್ವಾಮಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಹಿಂದುಳಿದ ನೇಕಾರ ಪದ್ಮಶಾಲಿ ಜನಾಂಗ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ಸ್ಪರ್ಧಾತ್ಮಕ ಜಗತ್ತಿನ ಪೈಪೋಟಿ ಎದುರಿಸಬೇಕಾದರೆ ಶಿಕ್ಷಣ ಪ್ರಮುಖ ಸಾಧನವಾಗಿದೆಯೆಂದರು ಸರಕಾರ ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸು ಮಾಡುವತ್ತ ಗಮನ ಹರಿಸಿ ಎಂದು ಸಲಹೆ ನೀಡಿದರು. ಪದ್ಮಶಾಲಿ ಸಂಘದ ನಿರ್ದೇಶಕ ಭಾನುಪ್ರಕಾಶ್ ಮಾತನಾಡಿ, ಮಾರ್ಕಂಡೇಯ ಸ್ವಾಮಿ ಜಯಂತಿ ಅಂಗವಾಗಿ ನಡೆಯುತ್ತಿರುವ ಪ್ರತಿಭಾ ಪುರಸ್ಕಾರ ವಿಶೇಷವೆನಿಸಿದ್ದು, ಸಮುದಾಯದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಂಘ ಸಂಸ್ಥೆಯ ನೆರವು ಅಗತ್ಯವಾಗಿದೆ ಎಂದರು. ಜಿಲ್ಲಾ ನೇಕಾರ ಪದ್ಮಶಾಲಿ ಸಂಘದ ಅಧ್ಯಕ್ಷ ಬಿ.ಎಲ್. ಗೋವಿಂದಪ್ಪ, ರಾಮಣ್ಣ, ಡಾ.ಶರತ್, ಡಾ. ನಾಗರಾಜ್, ಶ್ರೀನಿವಾಸ್, ರಾಮಕೃಷ್ಣ, ಪ್ರಕಾಶ್, ಗಿರೀಶ್ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement