ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಟಿಕೆಟ್ ನೀಡಿದರೆ ಲೋಕಸಭೆಗೆ ಸ್ಪರ್ಧೆ

Mainashree
Updated On : 1 Jan 2014, 11:17 am

ಕ.ಪ್ರ.ವಾರ್ತೆ ಪಾವಗಡ ಜ.1
ಈಗಾಗಲೇ ಪಕ್ಷದ ರಾಜ್ಯ ವರಿಷ್ಠರೊಂದಿಗೆ ಚರ್ಚಿಸಿದ್ದು ಟಿಕೆಟ್ ನೀಡಿದರೆ ಜೆಡಿಎಸ್‌ನಿಂದ ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸ್ವರ್ಧಿಸುವುದಾಗಿ ತಾಲೂಕು ಜೆಡಿಎಸ್ ಮುಖಂಡ ಗೋರಸ್‌ಮಾವು ವೆಂಕಟರಮಣಪ್ಪ ತಿಳಿಸಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಾಲೂಕಿನ ಗೋರಸ್‌ಮಾವು ಗ್ರಾಮದ ವಾಸಿಯಾದ ನಾನು, ಚಿತ್ರದುರ್ಗ ಲೋಕಸಭಾ ಚುನಾವಣೆಯ ಜೆಡಿಎಸ್ ಟೆಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದರು. ಚುನಾವಣೆಗೆ ಸ್ವರ್ಧಿಸುವ ಹಿನ್ನಲೆಯಲ್ಲಿ ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಈ ವಿಚಾರ ಚರ್ಚಿಸಲಾಗಿದೆ.ಅಭ್ಯರ್ಥಿ ವಿಷಯಕ್ಕೆ ಸಂಬಂಧಪಟ್ಟಂತೆ ದೇವೇಗೌಡರು ಅಶೀರ್ವಾದ ಕೂಡ ಮಾಡಿದ ಮೇರೆಗೆ ಕ್ಷೇತ್ರ ವ್ಯಾಪ್ತಿ ತಾಲೂಕುವಾರು ಪ್ರವಾಸ ಹಮ್ಮಿಕೊಂಡು ಅಲ್ಲಿನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದರು.
ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎನ್. ತಿಮ್ಮಾರೆಡ್ಡಿ, ಶಾಸಕ ಕೆ,ಎಂ.ತಿಮ್ಮರಾಯಪ್ಪ, ಜಿಪಂ ಸದಸ್ಯ ಆರ್.ಸಿ.ಅಂಜಿನಪ್ಪ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ.ಈ ಬಗ್ಗೆ ಸ್ಥಳೀಯ ಮುಖಂಡರು ಒಲವು ವ್ಯಕ್ತಪಡಿಸಿದ್ದು ಪಕ್ಷದಿಂದ ಟಿಕೆಟ್ ನೀಡಿದರೆ ಲೋಕಸಭೆ ಚುನಾವಣೆಗೆ ಜೆಡಿಎಸ್‌ನಿಂದ ಸ್ವರ್ಧಿಸಿ ಗೆಲ್ಲುವ ವಿಶ್ವಾಸ ಅವರು ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement