ರೇಪ್: ಮುಖ್ಯ ಶಿಕ್ಷಕ ಬಂಧನ
ತುಮಕೂರು: ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಮುಖ್ಯ ಶಿಕ್ಷಕನೊಬ್ಬನನ್ನು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ. ಶಿರಾ ತಾಲೂಕಿನ ಗೋಣಿ ಹಳ್ಳಿಯ ಹನುಮಂತರಾಯಪ್ಪ ಬಂಧಿತ ಆರೋಪಿ. ಈ ಮುಖ್ಯ ಶಿಕ್ಷಕ ಕಳೆದ ಡಿ.3ರಂದು ಅದೇ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಆಕೆಯ ತಾಯಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಬಿಇಒ ರಾಜಕುಮಾರ್ ಭೇಟಿ ನೀಡಿ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿದ್ದಾಗಿ ತಿಳಿದು ಬಂದಿದೆ.