ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸುದ್ದಿ ಸಂಕ್ಷೇಪ

Mainashree
Updated On : 4 Jan 2014, 10:57 am

ಇಂದಿನಿಂದ ವಾರಾಂತ್ಯ ಬಿಎ ತರಗತಿ
ಪಾವಗಡ: 2013-14ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಾರಾಂತ್ಯ ಬಿಎ ತರಗತಿಗಳನ್ನು ಜ. 5, ಭಾನುವಾರದಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾರಂಭಿಸಲಾಗುವುದೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅರ್ಥ ಶಾಸ್ತ್ರ ಉಪನ್ಯಾಸಕ ಡಾ.ವೈ.ಎಸ್. ಹನುಮಂತರಾಯಪ್ಪ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯು 2013-14ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ ಕಾಲೇಜಿನಲ್ಲಿ ವಾರಾಂತ್ಯ ತರಗತಿಗಳನ್ನು ಪ್ರಾರಂಭಿಸಲಾಗಿದ್ದು ಪ್ರಥಮ, ದ್ವಿತೀಯ ಹಾಗೂ ತೃತೀಯ ಬಿಎ ತರಗತಿಗಳ ಆಸಕ್ತಿ ವಿದ್ಯಾರ್ಥಿಗಳು ಸಂಪರ್ಕಿಸುವಂತೆ ಅವರು ಕೋರಿದ್ದಾರೆ. ಆಸಕ್ತ ಬಿಎ ವಿದ್ಯಾರ್ಥಿಗಳು ಸಂಪರ್ಕಿಸಬೇಕಾದ ವಿಳಾಸ ಡಾ.ವೈ.ಎಸ್.ಹನುಮಂತರಾಯ, ಅರ್ಥಶಾಸ್ತ್ರ ಉಪನ್ಯಾಸಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾವಗಡ, ಮೊ. 9448432918.
ಉಪ್ಪಾರಹಳ್ಳಿ ಗೇಟ್ ತೆರೆಯಲು ಆಗ್ರಹ
ತುಮಕೂರು: ಉಪ್ಪಾರಹಳ್ಳಿ ಗೇಟ್ ಮುಚ್ಚಿರುವುದರಿಂದ ಉಪ್ಪಾರಹಳ್ಳಿ, ಶೆಟ್ಟಿಹಳ್ಳಿ, ಗೂಳಹರಿವೆ, ಜಯನಗರ ಬಡಾವಣೆಯ ನಾಗರಿಕರಿಗೆ ತೊಂದರೆಯಾಗಿದ್ದು ಈ ಕೂಡಲೇ ಗೇಟ್ ತೆರೆಯುವಂತೆ ನಗರಸಭಾ ಸದಸ್ಯ ಪಟೇಲ್ ನಾಗರಾಜರಾವ್ ಆಗ್ರಹಿಸಿದ್ದಾರೆ. ಶೆಟ್ಟಿಹಳ್ಳಿ ಕೆಳಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಈಗಾಗಲೇ ಶೆಟ್ಟಿಹಳ್ಳಿ ಗೇಟ್ ಮುಚ್ಚಲಾಗಿದೆ. ಈಗ ಉಪ್ಪಾರಹಳ್ಳಿ ಗೇಟ್ ಕೂಡ ಮುಚ್ಚಿರುವುದರಿಂದ ತೀವ್ರ ತೊಂದರೆಯಾಗಿದೆ. ಪ್ರತಿಯೊಬ್ಬರು ಮೇಲ್ಸೇತುವೆಯನ್ನೇ ಆಶ್ರಯಿಸಬೇಕಾಗಿದೆ. ರಾತ್ರಿ ವೇಳೆ ಅಲ್ಲಿ ವಿದ್ಯುತ್ ಸಂಪರ್ಕ ಕೂಡ ಇಲ್ಲ. ಹೀಗಾಗಿ ಪ್ರಯಾಣಿಕರು ತೀವ್ರ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಶೆಟ್ಟಿಹಳ್ಳಿ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯುವವರೆಗೆ ಉಪ್ಪಾರಹಳ್ಳಿ ಗೇಟ್ ತೆರೆಯುವಂತೆ ಅವರು ಆಗ್ರಹಿಸಿದ್ದಾರೆ.
'ಜನಪರ ಯೋಜನೆ ಅರ್ಹರಿಗೆ ತಲುಪಲಿ'
ಗುಬ್ಬಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಿಸುವ ಸದುದ್ದೇಶದಿಂದ ಅಖಿಲ ಭಾರತ ಕಾಂಗ್ರೆಸ್ ಸಾಮಾಜಿಕ ಸೇವಾ ಸಂಸ್ಥೆ ಸ್ಥಾಪಿಸಿರುವುದಾಗಿ ಸೇವಾ ಸಂಸ್ಥೆ ರಾಜ್ಯಾಧ್ಯಕ್ಷ ಕೆ.ಎಂ.ಸತೀಶ್‌ಕುಮಾರ್ ತಿಳಿಸಿದರು.
ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಾಮಾಜಿಕ ಸೇವಾ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು ಜನಸಾಮಾನ್ಯರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಗತಿ ಪಥದತ್ತ ಸಾಗುವಂತೆ ಕಿವಿಮಾತು ಹೇಳಿದರು.  ದಕ್ಷಿಣ ಭಾರತ ಕಾಂಗ್ರೆಸ್ ಸಂಘಟಕ ಪವನ್ ಅಗರ್‌ವಾಲ್, ರಾಜ್ಯ ಉಪಾಧ್ಯಕ್ಷ ಕೆ.ಎಸ್.ಪ್ರಕಾಶ್, ಮಂಜುನಾಥ್, ಕಾರ್ಯಾಧ್ಯಕ್ಷ ಶಿವಕುಮಾರ್, ಜಿಲ್ಲಾಧ್ಯಕ್ಷ ರವಿ, ಉಪಾಧ್ಯಕ್ಷ ಸತೀಶ್, ತಾಲೂಕು ಅಧ್ಯಕ್ಷ ಹೆಚ್.ಎಂ.ಉಮಾಶಂಕರ್, ಎಸ್.ಟಿ. ಘಟಕದ ಅಧ್ಯಕ್ಷ ಎನ್.ಜಿ. ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು.
ರು. 3 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ
ಪಾವಗಡ: ಕಲ್ಲಿನಿಂದ ಮಾಲೀಕರೊಬ್ಬರ ಮನೆಯ ಬಾಗಿಲು ಒಡೆದು ಒಳ ನುಗ್ಗಿ ಮಂಕಿ ಕ್ಯಾಪ್ ಹಾಕಿಕೊಂಡಿದ್ದ ನಾಲ್ವರು ದರೋಡೆಕೋರರು ಪತ್ನಿಯ ಕೊರಳಲ್ಲಿದ್ದ ಸುಮಾರು 3ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ಪಟ್ಟಣ ಹೊರವಲಯದ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಟೀಚರ್ಸ್ ಕಾಲೋನಿಯ ರವಿಚಂದ್ರರಾವ್ ಎಂಬುವರು ಮನೆಗೆ ಕನ್ನಹಾಕಿದ ನಾಲ್ವರು ದರೋಡೆಕೋರರು ರಾತ್ರಿ ವೇಳೆ ಮನೆಯಲ್ಲಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಮನೆಯ ಮುಂಬಾಗಿಲನ್ನು ದೊಡ್ಡ ಕಲ್ಲಿನಿಂದ ಜಜ್ಜಿ ಬಾಗಿಲು ಮುರಿದು ಒಳ ಪ್ರವೇಶಿಸಿ ಮನೆಯನ್ನೆಲ್ಲಾ ಶೋಧ ಮಾಡಿದ್ದಾರೆ. ನಂತರ ಮಹಿಳೆ ಕೊರಳಲಿದ್ದ ಚಿನ್ನದ ಸರ ಸೇರಿದಂತೆ ವಾಲೆ ಇತರೆ ಸುಮಾರು 3ಲಕ್ಷ ರು. ಮೌಲ್ಯದ  ಚಿನ್ನಾಭರಣ ಕದ್ದಿದ್ದಾರೆ. ಮಾಲೀಕ ರವಿಚಂದ್ರರಾವ್ ಮತ್ತು ಅವರ ಪತ್ನಿ ಹಾಗೂ ಕುಟುಂಬದ ಸದಸ್ಯರನ್ನು ಮನೆಯಲ್ಲಿಯೇ ಕೂಡಿ ಹಾಕಿ ಬೀಗ ಜಡಿದು ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಪಾವಗಡ ಠಾಣಾ ಪಿಎಸ್‌ಐ ಆಶೋಕ್ ಕುಮಾರ್ ಹಾಗೂ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.  
ಪತಿ-ಪತ್ನಿ ವರ್ಗಾವಣೆಗೆ ಅರ್ಜಿ ಆಹ್ವಾನ
ಚಿಕ್ಕನಾಯಕನಹಳ್ಳಿ: ಪತಿ-ಪತ್ನಿ ವರ್ಗಾವಣೆಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್ ತಿಳಿಸಿದ್ದಾರೆ.  ಪ್ರಸ್ತುತ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ವರ್ಗಾವಣೆಯಲ್ಲಿ ಪತಿ-ಪತ್ನಿ ಪ್ರಕರಣಕ್ಕೆ ಆದ್ಯತೆ ಪಡೆಯಲು ಪತಿ-ಪತ್ನಿಯ ವಿವರವಾದ ಮಾಹಿತಿಯನ್ನು ಸಂಬಂಧಿಸಿದ ಕಾರ್ಯನಿರ್ವಾಹಕರಿಗೆ ನೇರವಾಗಿ ಜನವರಿ 6ರಂದು ಸಂಜೆ 4-30ರೊಳಗಾಗಿ ಸಲ್ಲಿಸುವುದು. ತಪ್ಪಿದಲ್ಲಿ 2014-15ರ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸಂದರ್ಭದಲ್ಲಿ ಪತಿ-ಪತ್ನಿ, ಪತಿ  ಅಥವಾ ಪತ್ನಿ ಪ್ರಕರಣದಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಳ್ಳುವ ಸಾಧ್ಯತೆಗಳಿದ್ದು ತಪ್ಪದೆ ಮಾಹಿತಿ ನೀಡಲು ತಿಳಿಸಿದೆ.
ಕರವೇಯಿಂದ ಹೊಸ ವರ್ಷಾಚರಣೆ
ಹುಳಿಯಾರು: ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆಯವರು 2014ನೇ ವರ್ಷಾಚರಣೆಯ ಅಂಗವಾಗಿ ಪಟ್ಟಣದ ಕರವೇ ವೃತ್ತದಲ್ಲಿ  ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಆಚರಿಸಿದರು. ಕರವೇ ಹೋಬಳಿ ಘಟಕದ ಅಧ್ಯಕ್ಷ ಕೋಳಿ ಶ್ರೀನಿವಾಸ್, ಗೌರಾವಾಧ್ಯಕ್ಷ ಕ್ಯಾಸೆಟ್ ರಂಗಸ್ವಾಮಿ, ಖಜಾಂಜಿ ಮೆಡಿಕಲ್  ಚನ್ನಬಸವಯ್ಯ, ಪದಾಧಿಕಾರಿಗಳಾದ ಸಿದ್ದೇಶ್, ಹರೀಶ್, ಕುಮಾರ್, ರಾಜು, ಮಂಜುನಾಥ್, ಲಕ್ಷ್ಮೀಕಾಂತ್,  ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದು, ಹೊಸವರ್ಷದ ಶುಭಾಷಯ ವಿನಿಮಯ ಮಾಡಿಕೊಂಡರು.
'ಜನಪರ ಯೋಜನೆ ಅರ್ಹರಿಗೆ ತಲುಪಲಿ'
ಗುಬ್ಬಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಿಸುವ ಸದುದ್ದೇಶದಿಂದ ಅಖಿಲ ಭಾರತ ಕಾಂಗ್ರೆಸ್ ಸಾಮಾಜಿಕ ಸೇವಾ ಸಂಸ್ಥೆ ಸ್ಥಾಪಿಸಿರುವುದಾಗಿ ಸೇವಾ ಸಂಸ್ಥೆ ರಾಜ್ಯಾಧ್ಯಕ್ಷ ಕೆ.ಎಂ.ಸತೀಶ್‌ಕುಮಾರ್ ತಿಳಿಸಿದರು.
ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಾಮಾಜಿಕ ಸೇವಾ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು ಜನಸಾಮಾನ್ಯರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಗತಿ ಪಥದತ್ತ ಸಾಗುವಂತೆ ಕಿವಿಮಾತು ಹೇಳಿದರು.  ದಕ್ಷಿಣ ಭಾರತ ಕಾಂಗ್ರೆಸ್ ಸಂಘಟಕ ಪವನ್ ಅಗರ್‌ವಾಲ್, ರಾಜ್ಯ ಉಪಾಧ್ಯಕ್ಷ ಕೆ.ಎಸ್.ಪ್ರಕಾಶ್, ಮಂಜುನಾಥ್, ಕಾರ್ಯಾಧ್ಯಕ್ಷ ಶಿವಕುಮಾರ್, ಜಿಲ್ಲಾಧ್ಯಕ್ಷ ರವಿ, ಉಪಾಧ್ಯಕ್ಷ ಸತೀಶ್, ತಾಲೂಕು ಅಧ್ಯಕ್ಷ ಹೆಚ್.ಎಂ.ಉಮಾಶಂಕರ್, ಎಸ್.ಟಿ. ಘಟಕದ ಅಧ್ಯಕ್ಷ ಎನ್.ಜಿ. ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement